ಪುತ್ತೂರು, 20 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದ ‘ಅಶೋಕ ಜನಮನ–2025’ ಹಾಗೂ ದೀಪಾವಳಿ ಪ್ರಯುಕ್ತ ಹಮ್ಮಿಕೊಂಡ ವಸ್ತ್ರದಾನ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಶಾಸಕ ಅಶೋಕ್ ರೈ ಅವರ ಮಾಲೀಕತ್ವದ ರೈ ಎಸ್ಟೇಟ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ದೀಪಾವಳಿ ಹಿನ್ನೆಲೆ ಸಾರ್ವಜನಿಕರಿಗೆ ತಟ್ಟೆ ಹಾಗೂ ವಸ್ತ್ರ ಹಂಚುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮ ನಡೆದ ಮೈದಾನದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನ ಸೇರಿದ್ದರಿಂದ ಗೊಂದಲ ಉಂಟಾಗಿ ನೂಕುನುಗ್ಗಲು ಸಂಭವಿಸಿದೆ. ಈ ವೇಳೆ ಮಹಿಳೆಯರು ಮತ್ತು ಮಕ್ಕಳು ಸೇರಿ ಹಲವರಿಗೆ ಉಸಿರಾಟದ ತೊಂದರೆ ಉಂಟಾಗಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ತಕ್ಷಣ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa