ರಾಷ್ಟ್ರಪತಿಗಳಿಗೆ ದೀಪಾವಳಿ ಶುಭಾಶಯ ಕೋರಿದ ಪ್ರಧಾನಿ ಮೋದಿ
ನವದೆಹಲಿ, 20 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು. ರಾಷ್ಟ್ರಪತಿಗಳ ಸಚಿವಾಲಯವು ಇಬ್ಬರು ನಾಯಕರ ಭೇಟಿಯ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊ
Wish


ನವದೆಹಲಿ, 20 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.

ರಾಷ್ಟ್ರಪತಿಗಳ ಸಚಿವಾಲಯವು ಇಬ್ಬರು ನಾಯಕರ ಭೇಟಿಯ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದೆ. ಇದೇ ವೇಳೆ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಕೂಡ ಇಂದು ರಾಷ್ಟ್ರಪತಿ ಭೇಟಿ ಮಾಡಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ತಮ್ಮ ಕುಟುಂಬದೊಂದಿಗೆ ರಾಷ್ಟ್ರಪತಿಗಳನ್ನು ಭೇಟಿಯಾದರು ಮತ್ತು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಕೂಡ ರಾಷ್ಟ್ರಪತಿಗಳನ್ನು ಭೇಟಿಯಾಗಿ ಹಬ್ಬದ ಶುಭಾಶಯ ಕೋರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande