ನಾಳೆ ಧಾರವಾಡದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ
ಧಾರವಾಡ, 20 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಅಕ್ಟೋಬರ್ 21, 2025 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕೇಂದ್ರಸ್ಧಾನದ ಹುತಾತ್ಮರ ಸ್ಮಾರಕ ಆವರಣದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ
ನಾಳೆ ಧಾರವಾಡದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ


ಧಾರವಾಡ, 20 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಅಕ್ಟೋಬರ್ 21, 2025 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕೇಂದ್ರಸ್ಧಾನದ ಹುತಾತ್ಮರ ಸ್ಮಾರಕ ಆವರಣದಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಧಾರವಾಡ ನಾಗರಿಕ ಮತ್ತು ಮೂಲ ಸೌಕರ್ಯ ಎಂಜಿನಿಯರಿಂಗ್ ವಿಭಾಗ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಧ್ಯಾಪಕ ಹಾಗೂ ನಿರ್ದೇಶಕ ವೆಂಕಪ್ಪಯ್ಯ ಆರ್.ದೇಸಾಯಿ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.

ಧಾರವಾಡ ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ ಆವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande