ನವದೆಹಲಿ, 20 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ದೀಪಾವಳಿ ಹಬ್ಬದ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದ್ದಾರೆ. ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕೂಡಾ ಭಾರತೀಯರಿಗೆ ಶುಭಾಶಯ ಕೋರಿದ್ದಾರೆ.
ರಾಷ್ಟ್ರಪತಿ ಮುರ್ಮು ಅವರು ಭಾರತ ಮತ್ತು ವಿದೇಶಗಳಲ್ಲಿ ವಾಸಿಸುವ ಭಾರತೀಯರಿಗೆ ಶುಭಾಶಯ ಕೋರಿದರೆ, ಪ್ರಧಾನಿ ಮೋದಿ ಅವರು “ದೀಪಾವಳಿ ಪ್ರತಿಯೊಬ್ಬರ ಜೀವನವನ್ನು ಸಂತೋಷ ಮತ್ತು ಸಮೃದ್ಧಿಯಿಂದ ಬೆಳಗಿಸಲಿ” ಎಂದು ಸಂದೇಶ ನೀಡಿದರು. ಅಮಿತ್ ಶಾ ಅವರು “ದೇವರು ಪ್ರತಿಯೊಬ್ಬರ ಆರೋಗ್ಯ ಮತ್ತು ಸಮೃದ್ಧಿಗಾಗಿ ಆಶೀರ್ವದಿಸಲಿ” ಎಂದು ಶುಭಾಶಯ ಕೋರಿದ್ದಾರೆ.
ವಿದೇಶಿ ನಾಯಕರು ದೀಪಾವಳಿಯ ಹಬ್ಬದ ಹರ್ಷ ಹಂಚಿಕೊಂಡಿದ್ದು, ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa