ಬೆಂಗಳೂರು, 20 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಕೋಲಾರ, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa