ಚಿತ್ರದುರ್ಗ, 20 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ನ. 01 ರಂದು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ನಾನಾ ಕ್ಷೇತ್ರಗಳಲ್ಲಿನ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಲಾಗಿದ್ದು, ಅರ್ಹ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕ್ರೀಡೆ, ಕೃಷಿ, ಸಮಾಜ ಸೇವೆ, ಶಿಕ್ಷಣ ಮತ್ತು ಸಾಹಿತ್ಯ, ಸಂಗೀತ, ರಂಗಭೂಮಿ, ಜಾನಪದ, ಮಾಧ್ಯಮ ಮತ್ತು ಛಾಯಾಗ್ರಹಣ, ವೈದ್ಯಕೀಯ ಮತ್ತು ಸಂಶೋಧನೆ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಹಾಗೂ ಸಾಧನೆ ಮಾಡಿರುವ ಅರ್ಹ ಸಾಧಕರು, ತಮ್ಮ ಸ್ವ-ವಿವರದೊಂದಿಗೆ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಅ. 24 ರಂದು ಸಂಜೆ 05 ಗಂಟೆಯ ಒಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತ.ರಾ.ಸು. ರಂಗಮಂದಿರ, ಚಿತ್ರದುರ್ಗ ಇವರಿಗೆ ಕಚೇರಿ ವೇಳೆಯಲ್ಲಿ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ರಾಜ್ಯೋತ್ಸವ ಸನ್ಮಾನ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಗುರುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa