ಬೀದಿ ನಾಟಕ ಪ್ರದರ್ಶನ : ಕಲಾತಂಡಗಳಿಂದ ಅರ್ಜಿ ಆಹ್ವಾನ
ಚಿತ್ರದುರ್ಗ, 20 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರೋಗ್ಯ ಕಾರ್ಯಕ್ರಮಗಳ ಕುರಿತು ಜನಜಾಗೃತಿ ಮೂಡಿಸಲು ಕಲಾ ತಂಡಗಳನ್ನು ಆಯ್ಕೆ ಮಾಡಲು ಉದ್ದೇಶಿಸಲಾಗಿದ್ದು, ಅರ್ಹ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆರೋಗ್ಯ ಮತ
ಬೀದಿ ನಾಟಕ ಪ್ರದರ್ಶನ : ಕಲಾತಂಡಗಳಿಂದ ಅರ್ಜಿ ಆಹ್ವಾನ


ಚಿತ್ರದುರ್ಗ, 20 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರೋಗ್ಯ ಕಾರ್ಯಕ್ರಮಗಳ ಕುರಿತು ಜನಜಾಗೃತಿ ಮೂಡಿಸಲು ಕಲಾ ತಂಡಗಳನ್ನು ಆಯ್ಕೆ ಮಾಡಲು ಉದ್ದೇಶಿಸಲಾಗಿದ್ದು, ಅರ್ಹ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2025-26ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ, ಬಾಲ ಗರ್ಭಿಣಿ, ಗಂಡಾಂತರ ಗರ್ಭಿಣಿ, ರಕ್ತ ಹೀನತೆ, ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ, ಕುಟುಂಬ ಕಲ್ಯಾಣ ವಿಧಾನ, ಸುರಕ್ಷಿತ ಗರ್ಭಪಾತ ಭ್ರೂಣ ಲಿಂಗಪತ್ತೆ ಕಾಯ್ದೆ, ಆಯುಷ್ಮಾನ್ ಭಾರತ್ ಕಾರ್ಡ್ ಹಾಗೂ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಿಗೆ ಬೀದಿ ನಾಟಕ ಪ್ರದರ್ಶನದ ಮೂಲಕ ಜಾಗೃತಿ ಮೂಡಿಸಲು ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ರಾಷ್ಟ್ರೀಯ ಸಂಗೀತ ಮತ್ತು ಡ್ರಾಮ ಡಿವಿಜನ್ , ಕನ್ನಡ ಮತ್ತು ಸಂಸ್ಕøತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೇರಿದಂತೆ ಹಲವಾರು ಇಲಾಖೆಗಳಲ್ಲಿ ಬೀದಿ ನಾಟಕ ಕಾರ್ಯಕ್ರಮಗಳನ್ನು ನೀಡಿ ಅನುಭವ ಹೊಂದಿರುವ ಕಲಾ ತಂಡಗಳು ಅರ್ಜಿ ಸಲ್ಲಿಸಬಹುದಾಗಿದೆ.

ಒಂದು ಕಲಾ ತಂಡದಲ್ಲಿ ಕನಿಷ್ಠ 8 ಕಲಾವಿದರು ಇರಬೇಕು. ಈ ಪೈಕಿ ಇಬ್ಬರು ಮಹಿಳಾ ಕಲಾವಿದರು ಕಡ್ಡಾಯವಾಗಿರಬೇಕು. ಒಂದು ತಂಡದಲ್ಲಿ ಇರುವ ಸದಸ್ಯರು ಬೇರೊಂದು ತಂಡದಲ್ಲಿ ಭಾಗವಹಿಸುವಂತಿಲ್ಲ, ಕಲಾ ತಂಡಗಳು ನೋಂದಾಯಿತ ತಂಡವಾಗಿದ್ದು, ಚಾಲ್ತಿ ವರ್ಷದ ಆಡಿಟ್ ವರದಿ ಹಾಗೂ ನವೀಕರಣ ಹೊಂದಿರಬೇಕು. ಕಲಾತಂಡಗಳ ಪ್ರತಿ ಸದಸ್ಯರ ಹೆಸರು ಮತ್ತು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಸಹಿಯೊಂದಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯ ಐಇಸಿ ವಿಭಾಗಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯಕ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande