ಕೌಟುಂಬಿಕ ಕಲಹದಿಂದ ಬೇಸತ್ತು, ನದಿಗೆ ಹಾರಿ ತಾಯಿ,ಮಗಳು ಆತ್ಮಹತ್ಯೆ
ಹಾವೇರಿ, 20 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ ಹಾಗೂ ಮಗಳು ವರದಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ ಗ್ರಾಮದ ಬಳಿ ನಡೆದಿದೆ. ಸವಿತಾ ಉಳ್ಳಾಗಡ್ಡಿ ಹಾಗೂ ಮಗಳು ಕಾವ್ಯಾ (12) ಆತ್ಮಹತ್ಯೆಗೆ ಶರಣಾದವರು. ಗಂಡನ ಮನೆಯಲ್ಲಿ ದಿನನ
ಕೌಟುಂಬಿಕ ಕಲಹದಿಂದ ಬೇಸತ್ತು, ನದಿಗೆ ಹಾರಿ ತಾಯಿ,ಮಗಳು ಆತ್ಮಹತ್ಯೆ


ಹಾವೇರಿ, 20 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ ಹಾಗೂ ಮಗಳು ವರದಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ ಗ್ರಾಮದ ಬಳಿ ನಡೆದಿದೆ. ಸವಿತಾ ಉಳ್ಳಾಗಡ್ಡಿ ಹಾಗೂ ಮಗಳು ಕಾವ್ಯಾ (12) ಆತ್ಮಹತ್ಯೆಗೆ ಶರಣಾದವರು.

ಗಂಡನ ಮನೆಯಲ್ಲಿ ದಿನನಿತ್ಯದ ಕಲಹದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇಲಾಖೆ‌ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೋಣಿ ಮೂಲಕ ನದಿಯಲ್ಲಿ ಹುಡುಕಾಟ ಪ್ರಾರಂಭಿಸಿದರು. ಇದೀಗ ಕಾವ್ಯಾ ಅವರ ಮೃತದೇಹ ಪತ್ತೆಯಾಗಿದ್ದು, ಸವಿತಾ ಅವರ ಮೃತದೇಹಕ್ಕಾಗಿ ಹುಡುಕಾಟ ಮುಂದುವರೆದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande