ಪುತ್ತೂರು, 20 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದವರಿಗೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ರೈ ಎಸ್ಟೇಟ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇವರ ವತಿಯಿಂದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಅಶೋಕ ಜನ-ಮನ 2025 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಶೋಕ್ ಅವರು ಕಾಂಗ್ರೆಸ್ ಶಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ಟ್ರಸ್ಟ್ ವತಿಯಿಂದ ಪ್ರತಿ ವರ್ಷ ವಸ್ತ್ರದಾನ ಮಾಡುವ ಕಾರ್ಯವನ್ನು 13 ವರ್ಷಗಳಿಂದ ಮಾಡುತ್ತಾ ಬರುತ್ತಿದ್ದಾರೆ. ಒಂದು ಲಕ್ಷ ಜನರಿಗೆ ಇಂದು ವಸ್ತ್ರದಾನ ಮಾಡುತ್ತಿದ್ದಾರೆ. ಇತರರಿಗೆ ಅವರು ಸ್ಫೂರ್ತಿಯಾಗಲಿ ಎಂದರು.
ಸಮಾಜದಲ್ಲಿನ ದುರ್ಬಲರಿಗೆ ತಮ್ಮ ಗಳಿಕೆಯ ಒಂದು ಭಾಗವನ್ನು ನೀಡುವುದು ಒಳ್ಳೆಯ ಕೆಲಸ ಎಂದರು.
ಸಮ ಸಮಾಜ ನಿರ್ಮಾಣ ಸಂವಿಧಾನದ ಉದ್ದೇಶ. ಕಾಯಕ ಮತ್ತು ದಾಸೋಹ ತತ್ವವನ್ನು ಬಸವಣ್ಣ ನಮಗೆ ನೀಡಿದ್ದಾರೆ ಎಂದರು.
ನಮ್ಮ ನಾಡು ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣಬೇಕು. ಸರ್ವಜನಾಂಗದ ಶಾಂತಿಯ ತೋಟವಾಗಬೇಕು. ಪರಸ್ಪರ ಕಚ್ಚಾಡುವ, ಅಸಮಾನತೆವುಳ್ಳ ಸಮಾಜ ನಿರ್ಮಾಣವಾಗಬಾರದು. ಇತರೆ ಧರ್ಮಗಳ ಬಗ್ಗೆ ಸಹಿಷ್ಣುತೆ ಅಗತ್ಯ. ಸಹಬಾಳ್ವೆ ಇರಬೇಕು. ಇದನ್ನು ಎಲ್ಲರೂ ಪಾಲಿಸಿದಾಗ ಸಂವಿಧಾನದ ಧ್ಯೇಯೋದ್ದೇಶಗಳನ್ನು ಪಾಲಿಸಿದಂತಾಗುತ್ತದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa