ಬೆಳಗಾವಿ, 20 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ವಾಲ್ಮೀಕಿ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ವಾಲ್ಮೀಕಿ ಸಮಾಜದ ಮುಖಂಡರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ ವಾಲ್ಮೀಕಿ ಸಮಾಜದ ಮುಖಂಡರು ಮತ್ತು ಕಾರ್ಯಕರ್ತರು ಟಯರ್ಗೆ ಬೆಂಕಿ ಹಚ್ಚಿ, ರಮೇಶ್ ಕತ್ತಿ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ, ದಹನ ಮಾಡಿ ತಮ್ಮ ಆಕ್ರೋಶ ಹೊರ ಹಾಕಿದರು.
ಶೀಘ್ರವೇ ರಮೇಶ ಕತ್ತಿ ಬಂಧಿಸಬೇಕು ಇಲ್ಲದಿದ್ದರೆ ಬೆಳಗಾವಿ ಬಂದ್ಗೆ ಕರೆ ನೀಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa