ಬೆಂಗಳೂರು, 21 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ದೀಪಾವಳಿ ಬಲಿಪಾಡ್ಯಮಿ ಹಬ್ಬದ ಪ್ರಯುಕ್ತ ರಾಜ್ಯದ ಎಲ್ಲಾ ಮುಜರಾಯಿ ಇಲಾಖೆಯ ಆಧೀನದಲ್ಲಿರುವ ದೇವಾಲಯಗಳಲ್ಲಿ ಬುಧವಾರ ಗೋಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸರ್ಕಾರದ ಈ ನಿರ್ದೇಶನದಂತೆ ಪ್ರತಿ ದೇವಾಲಯದಲ್ಲೂ ಸಾಂಪ್ರದಾಯಿಕ ವಿಧಿವಿಧಾನಗಳಂತೆ ಗೋಮಾತೆಗೆ ಪೂಜೆ ಸಲ್ಲಿಸಿ, ಭಕ್ತರ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸುವಂತೆ ಸೂಚಿಸಲಾಗಿದೆ.
ಬಲಿಪಾಡ್ಯಮಿ ಹಬ್ಬವನ್ನು ಲಕ್ಷ್ಮೀ ಪೂಜೆಯ ನಂತರದ ದಿನವಾಗಿ ಆಚರಿಸಲಾಗುತ್ತದೆ. ಧಾರ್ಮಿಕ ನಂಬಿಕೆಯ ಪ್ರಕಾರ ಈ ದಿನ ಮಹಾಬಲಿ ಚಕ್ರವರ್ತಿ ಪಾತಾಳದಿಂದ ಭೂಮಿಗೆ ಭೇಟಿ ನೀಡುತ್ತಾರೆ ಎಂಬ ನಂಬಿಕೆಯಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa