ಡಿ.ಕೆ.ಶಿವಕುಮಾರ್-ಉದ್ಯಮಿ ಕಿರಣ್ ಮಜುಂದಾರ್ ಶಾ ಚರ್ಚೆ
ಬೆಂಗಳೂರು, 21 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ರಸ್ತೆ ಗುಂಡಿ ನಿರ್ವಹಣೆ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ್ದ ಬಯೋಕಾನ್‌ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಭೇಟಿಯಾಗಿ ಮಾತುಕತೆ ನಡೆಸಿದರು. ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಆಗಮಿಸ
Meet


ಬೆಂಗಳೂರು, 21 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ರಸ್ತೆ ಗುಂಡಿ ನಿರ್ವಹಣೆ ವಿಚಾರದಲ್ಲಿ ಸರ್ಕಾರವನ್ನು ಟೀಕಿಸಿದ್ದ ಬಯೋಕಾನ್‌ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಭೇಟಿಯಾಗಿ ಮಾತುಕತೆ ನಡೆಸಿದರು.

ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಆಗಮಿಸಿದ ಅವರು ದೀಪಾವಳಿ ಹಬ್ಬದ ಶುಭಾಶಯ ತಿಳಿಸಿ ಸುಮಾರು 40 ನಿಮಿಷಗಳ ಕಾಲ ಮಾತುಕತೆ ನಡೆಸಿದರು.

ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ ಇಂದು ನನ್ನ ನಿವಾಸದಲ್ಲಿ ಉದ್ಯಮಿ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ಅವರನ್ನು ಭೇಟಿಯಾಗಿದ್ದು ಸಂತೋಷವಾಯಿತು. ಬೆಂಗಳೂರಿನ ಬೆಳವಣಿಗೆ, ನಾವೀನ್ಯತೆ ಮತ್ತು ಕರ್ನಾಟಕದ ಬೆಳವಣಿಗೆಯ ಕುರಿತು ಮುಂದಿನ ಹಾದಿಯ ಕುರಿತು ನಾವು ಉತ್ತಮ ಚರ್ಚೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande