ರಾಯಚೂರು, 21 ಅಕ್ಟೋಬರ್ (ಹಿ.ಸ.) ;
ಆ್ಯಂಕರ್ : ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ನಾಳೆ ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಬೆಳಗ್ಗೆ 8 ಗಂಟೆಗೆ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದುಕೊಂಡು ಅಲ್ಲಿಂದ 9.30ಕ್ಕೆ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮಕ್ಕೆ ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
10.30ಕ್ಕೆ ಬಿಚ್ಚಾಲಿಯಿಂದ ನಿರ್ಗಮಿಸಿ 11 ಗಂಟೆಗೆ ರಾಯಚೂರು ಗ್ರಾಮೀಣ ಪ್ರದೇಶದಲ್ಲಿನ ಶ್ರೀಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಬೆಳಿಗ್ಗೆ 11.30ಕ್ಕೆ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಮಧ್ಯಾಹ್ನ 12.30ಕ್ಕೆ ಪಂಚಮುಖಿಯಿ0ದ ನಿರ್ಗಮಿಸಿ ಮಂತ್ರಾಲಯಕ್ಕೆ ತೆರಳುವರು. ಸಂಜೆ 6.55ಕ್ಕೆ ಮಂತ್ರಾಲಯದಿ0ದ ರೈಲು ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಬಿ.ಎಸ್. ಶ್ರೀಧರ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್