ಗದಗ, 21 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಡಾ. ಎಚ್.ಕೆ.ಪಾಟೀಲ ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಗರಸಭೆಯ ಶೇ 18, ಎಸ್‌ಎಫ್‌ಸಿ ಶೇ 15 ಹಾಗೂ ನಗರಸಭೆಯ ಅನುದಾನದಡಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಿದರು.
ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ ಸೇರಿದಂತೆ ಇತರರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP