ಬೆಂಗಳೂರು, 21 ಅಕ್ಟೋಬರ್ (ಹಿ.ಸ.):
ಆ್ಯಂಕರ್:
ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘದೊಂದಿಗೆ ಸಂಪರ್ಕ ಹೊಂದುವುದು ತಪ್ಪಲ್ಲವೆಂದು ದೇಶದ ನ್ಯಾಯಾಂಗ ವ್ಯವಸ್ಥೆಯು ಅತ್ಯಂತ ಸ್ಪಷ್ಟವಾಗಿ ಪುನರುಚ್ಚರಿಸುತ್ತಲೇ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸರ್ಕಾರಿ ನೌಕರರು ಆರ್‌ಎಸ್‌ಎಸ್ ಕಾರ್ಯಕ್ರಮ, ಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎಂದು ಈ ಹಿಂದೆ ಹಲವಾರು ನ್ಯಾಯಾಲಯಗಳು ವಿವಿಧ ಪ್ರಕರಣಗಳಲ್ಲಿ ಮಹತ್ವದ ತೀರ್ಪುಗಳನ್ನು ನೀಡಿದೆ.
ರಾಜ್ಯದ ಕಾಂಗ್ರೆಸ್ ಸರ್ಕಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜೊತೆ ಗುರುತಿಸಿಕೊಳ್ಳುವ ಸರ್ಕಾರಿ ನೌಕರರ ಮೇಲೆ ಕ್ರಮಕೈಗೊಳ್ಳುವ ಮೊದಲು ದೇಶದ ಸಂವಿಧಾನ, ನ್ಯಾಯಾಲಯದ ತೀರ್ಪಿನ ಕುರಿತು ಅಧ್ಯಯನ ನಡೆಸಲಿ ಎಂದಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa