ಹುತಾತ್ಮ ಪೋಲಿಸರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ : ನ್ಯಾ.ಹೇಮಾವತಿ
ಹಾಸನ, 21 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ದೇಶದೊಳಗಿನ ಕಾನೂನು ಸುವ್ಯವಸ್ಥೆ ಪಾಲನೆ, ನಾಗರೀಕರ ಆಸ್ತಿ ಪಾಸ್ತಿ ರಕ್ಷಣೆ, ಅಪರಾಧ ತಡೆ ಹೀಗೆ ಹತ್ತು ಹಲವಾರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪ್ರಾಣ ತ್ಯಾಗ ಮಾಡಿ ಹುತಾತ್ಮರಾದ ಪೊಲೀಸರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹಾಸನ ಪ್ರಧಾನ
Police


ಹಾಸನ, 21 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ದೇಶದೊಳಗಿನ ಕಾನೂನು ಸುವ್ಯವಸ್ಥೆ ಪಾಲನೆ, ನಾಗರೀಕರ ಆಸ್ತಿ ಪಾಸ್ತಿ ರಕ್ಷಣೆ, ಅಪರಾಧ ತಡೆ ಹೀಗೆ ಹತ್ತು ಹಲವಾರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಪ್ರಾಣ ತ್ಯಾಗ ಮಾಡಿ ಹುತಾತ್ಮರಾದ ಪೊಲೀಸರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹಾಸನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೇಮಾವತಿ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿಂದು ಏರ್ಪಡಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಹೂ ಗುಚ್ಛ ಅರ್ಪಿಸಿ ಗೌರವ ಸಲ್ಲಿಸಿ ನಂತರ ನಡೆದ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು 1959 ರಲ್ಲಿ ಸಿಯಾಚಿನ್ ಗಡಿಯಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ದಾಳಿಯಿಂದ ಮೃತಪಟ್ಟವರ ಸ್ಮರಣಾರ್ಥವಾಗಿ ಪ್ರತಿ ವರ್ಷ ಅಕ್ಟೋಬರ್ 21 ರಂದು ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ನಡೆಸುವುದರ ಮೂಲಕ ಗೌರವ ಸಮರ್ಪಣೆ ಮಾಡಲಾಗುವುದು ಎಂದು ತಿಳಿಸಿದರು.

ಹುತಾತ್ಮರಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ತಿಳಿಸಿದರಲ್ಲದೆ, ಬಂದೋ ಬಸ್ತ್ ಮತ್ತಿತರ ಕರ್ತವ್ಯದ ಮೇಲೆ 24x7 ಸಮಯ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಕುಟುಂಬ ಹಾಗೂ ವೈಯಕ್ತಿಕವಾಗಿಯೂ ಗಮನಹರಿಸಲು ಸಾಧ್ಯವಾಗುವುದಿಲ್ಲ, ಇವರ ಸೇವಾ ಭದ್ರತೆ ಬಗ್ಗೆ ಹೆಚ್ಚಿನ ಗಮನಹರಿಸುವ ಅಗತ್ಯತೆ ಇದೆ ಎಂದರು.

ಸರ್ಕಾರಿ ಸೇವೆ ಬಗ್ಗೆ ಅಭಿಮಾನ ನಿಷ್ಠೆ ಇರಲೇಬೇಕು. ಅದನ್ನಿಟ್ಟುಕೊಂಡು ಕುಟುಂಬದ ವೈಯಕ್ತಿಕ ಭಾವನೆಗಳಿಗೂ ಬೆಲೆಕೊಡಬೇಕು. ಕರ್ತವ್ಯದಲ್ಲಿದ್ದು ಅದನ್ನು ಮರೆಯಬೇಡಿ, ಸಮಾಜಕ್ಕೆ ಉತ್ತಮ ಸೇವೆಯನ್ನು ನೀಡಲು ತಮಗೆ ಹೆಚ್ಚಿನ ಶಕ್ತಿ ದೊರೆಯಲಿ ಎಂದು ಹಾರೈಸಿದರು.

ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಹುತಾತ್ಮರ ಸ್ಮಾರಕಕ್ಕೆ ಹೂ ಗುಚ್ಛ ಅರ್ಪಿಸಿ ಗೌರವ ಸಮರ್ಪಣೆ ಮಾಡಿದ ನಂತರ ಮಾತನಾಡಿ ದೇಶ, ಸಮಾಜದ ಸ್ವಾಸ್ಥ್ಯ ಕಾಪಾಡುವುದಕ್ಕಾಗಿ ದುಡಿಯುವ ಪೊಲೀಸ್ ಇಲಾಖೆಯ ಅಮೋಘ ಸೇವೆಯನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande