ಭಾಲ್ಕಿ, 21 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬೀದರ ಜಿಲ್ಲೆಯ ಭಾಲ್ಕಿ ಕ್ಷೇತ್ರದಲ್ಲಿ ಸುಮಾರು ₹5 ಕೋಟಿ ಅನುದಾನದಡಿ ಖಟಕ್ ಚಿಂಚೋಳಿ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಾದರಿ ಪ್ರಾಥಮಿಕ ಶಾಲೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.
ಗ್ರಾಮೀಣ ಮಕ್ಕಳಿಗೆ ಆಧುನಿಕ ಸೌಲಭ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಈ ಶಾಲೆ ನಿರ್ಮಾಣಗೊಳ್ಳುತ್ತಿದೆ. ಈ ಶಾಲೆಯು ಭವಿಷ್ಯದ ಪೀಳಿಗೆಯು ಉತ್ತಮ ಶಿಕ್ಷಣದ ಮೂಲಕ ತಮ್ಮ ಕನಸುಗಳನ್ನು ನನಸುಮಾಡಲು ಸಹಾಯಕವಾಗಲಿದೆ ಎಂದು ಖಂಡ್ರೆ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa