ರಾಯಚೂರು, 21 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ತು ಸಭಾ ನಾಯಕರಾದ ಎನ್.ಎಸ್.ಬೋಸರಾಜು ಅವರು ನಾಳೆ ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ನಾಳೆ ಬೆಳಿಗ್ಗೆ 10 ಗಂಟೆಗೆ ರಾಯಚೂರಿನಿಂದ ನಿರ್ಗಮಿಸಿ ಬೆಳಿಗ್ಗೆ 11 ಗಂಟೆಗೆ ಸಿರವಾರ ಹಾಗೂ ಕವಿತಾಳನಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಸಂಜೆ 4 ಗಂಟೆಗೆ ಕವಿತಾಳದಿಂದ ನಿರ್ಗಮಿಸಿ ಅಲ್ಲಿಂದ ರಾಯಚೂರಿಗೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಯಾದ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್