ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೋಲಿಸ್ ವ್ಯವಸ್ಥೆ ಪ್ರಮುಖ:ಭುವನೇಶ ಪಾಟೀಲ
ಧಾರವಾಡ, 21 ಅಕ್ಟೋಬರ್ (ಹಿ.ಸ.): ಆ್ಯಂಕರ್: ಸಮಾಜದಲ್ಲಿ ಆಡಳಿತದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ ವ್ಯವಸ್ಥೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಪೊಲೀಸ ಅಧಿಕಾರಿ, ಸಿಬ್ಬಂದಿಗಳ ತ್ಯಾಗ, ಬಲಿದಾನವನ್ನು ಸ್ಮರಿಸುವುದು ಮತ್ತು ಹುತಾತ್ಮರಾದ ಪೊಲೀಸ ಸಿಬ್ಬಂದಿಗಳ ಕುಟುಂಬಗಳಿಗೆ ಬೆಂಬಲ, ಸಹಕ
Ceo


ಧಾರವಾಡ, 21 ಅಕ್ಟೋಬರ್ (ಹಿ.ಸ.):

ಆ್ಯಂಕರ್:

ಸಮಾಜದಲ್ಲಿ ಆಡಳಿತದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ ವ್ಯವಸ್ಥೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಪೊಲೀಸ ಅಧಿಕಾರಿ, ಸಿಬ್ಬಂದಿಗಳ ತ್ಯಾಗ, ಬಲಿದಾನವನ್ನು ಸ್ಮರಿಸುವುದು ಮತ್ತು ಹುತಾತ್ಮರಾದ ಪೊಲೀಸ ಸಿಬ್ಬಂದಿಗಳ ಕುಟುಂಬಗಳಿಗೆ ಬೆಂಬಲ, ಸಹಕಾರ ನೀಡುವುದು ನಮ್ಮೇಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಹೇಳಿದರು.

ಅವರು ಧಾರವಾಡ ಜಿಲ್ಲಾ ಪೊಲೀಸ ಇಲಾಖೆಯಿಂದ ಆಯೋಜಿಸಿದ್ದ ಪೊಲೀಸ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಾತನಾಡಿದರು.

ನಮ್ಮಲ್ಲರ ರಕ್ಷಣೆ ಹಾಗೂ ನಾಗರಿಕ ಹಕ್ಕುಗಳನ್ನು ಕಾಪಾಡಲು ತಮ್ಮನ್ನು ಕರ್ತವ್ಯದ ಮೂಲಕ ಅರ್ಪಿಸಿಕೊಂಡಿರುವ ಆರಕ್ಷಕರನ್ನು ಯಾವಾಗಲೂ ನಾವು ಗೌರವ, ಹೆಮ್ಮೆಯಿಂದ ಕಾಣಬೇಕು. ಸಮಾಜದಲ್ಲಿ ಮತ್ತು ಸರಕಾರದ ಆಡಳಿತದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ ವ್ಯವಸ್ಥೆ ಪ್ರಮುಖ ಪಾತ್ರ ನಿರ್ವಹಿಸುತ್ತದೆ ಎಂದು ಅವರು ಹೇಳಿದರು.

ಸಮಾಜದ ಸಂರಕ್ಷಣೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಣೆಯಲ್ಲಿ ತಮ್ಮ ಪ್ರಾಣ ತ್ಯಾಗ ಮಾಡುವ ಹಾಗೂ ದೈಹಿಕವಾಗಿ ಊನರಾಗುವ ಪೊಲೀಸ ಅಧಿಕಾರಿ, ಸಿಬ್ಬಂದಿಗಳಿಗೆ, ಅವರ ಕುಟುಂಬಗಳಿಗೆ ಪ್ರತಿಯೊಬ್ಬರು ಬೆಂಬಲ ನೀಡಿ, ಗೌರವಿಸಬೇಕು. ಮತ್ತು ಪೊಲೀಸರ ತ್ಯಾಗ, ಬಲಿದಾನಗಳನ್ನು ಸ್ಮರಿಸುವುದು ನಮ್ಮ ಜವಾಬ್ದರಿ ಎಂದು ಅವರು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande