ಉತ್ತರ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಪ್ರಾದೇಶಿಕ ಆಯುಕ್ತರ ಭೇಟಿ
ಕಾರವಾರ, 21 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಇಂದು ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿ ವಿವಿಧ ಇಲಾಖೆಗಳ ಕಾರ್ಯನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು. ನಂತರ ಅವರು ಪಶ್ಚಿಮ ಪದವೀಧರ ಮತಕ್ಷೇತ್ರದ ಪದವೀಧರ ಮತದಾರರ
Visit


ಕಾರವಾರ, 21 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಇಂದು ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಿ ವಿವಿಧ ಇಲಾಖೆಗಳ ಕಾರ್ಯನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು.

ನಂತರ ಅವರು ಪಶ್ಚಿಮ ಪದವೀಧರ ಮತಕ್ಷೇತ್ರದ ಪದವೀಧರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿ. ಮತದಾರರ ಪಟ್ಟಿಯ ಪರಿಷ್ಕರಣೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ, ಚುನಾವಣಾ ವಿಭಾಗದ ಅಧಿಕಾರಿಗಳು ಹಾಗೂ ಸಂಬಂಧಿಸಿದ ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande