ಬೆಂಗಳೂರು, 21 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಸಿ.ಎ.ಆರ್ ಕೆಂದ್ರಸ್ಥಾನದ ಹುತಾತ್ಮರ ಉದ್ಯಾನವನದಲ್ಲಿ ಆಯೋಜಿಸಿದ್ದ ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಪಾಲ್ಗೊಂಡು, ಹುತಾತ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಪೊಲೀಸರು ಹಾಗೂ ಎಲ್ಲ ಭದ್ರತಾ ಸಿಬ್ಬಂದಿಗಳ ಪಾತ್ರ ದೊಡ್ಡದು. ಕರ್ತವ್ಯದ ವೇಳೆ ಪ್ರಾಣವನ್ನು ಅರ್ಪಿಸಿದ ಪೊಲೀಸರ ತ್ಯಾಗ, ಬಲಿದಾನವನ್ನು ಎಂದಿಗೂ ಸ್ಮರಣೀಯ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa