
ಬಳ್ಳಾರಿ, 23 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರಿನ 17ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕಲ್ಯಾಣ ಕರ್ನಾಟಕ ಭಾಗದ ಅತ್ಯುತ್ತಮ ಸಾಧನೆಗೈದ ಪ್ರಗತಿಪರ ಕೃಷಿಕರಿಗೆ ಕೃಷಿ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲು 2024-25ನೇ ಸಾಲಿಗೆ ಕಲ್ಯಾಣ ಕರ್ನಾಟಕ ಭಾಗದ ಅರ್ಹರಿಂದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಆಯಾ ಜಿಲ್ಲೆಗಳ ಕೃಷಿ ವಿಜ್ಞಾನ ಕೇಂದ್ರ, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಹಾಗೂ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು ಇಲ್ಲಿ ಪಡೆಯಬಹುದು.
ಅರ್ಜಿಯನ್ನು ವಿಶ್ವವಿದ್ಯಾಲಯದ ವೆಬ್ ಸೈಟ್ https://uasraichur.karnataka.gov.in ನಲ್ಲಿ ಸಹ ಪಡೆಯಬಹುದು.
ಆಸಕ್ತ ರೈತರು ಸಂಬAಧಿಸಿದ ಎಲ್ಲಾ ದಾಖಲೆಗಳೊಂದಿಗೆ ಅರ್ಜಿಯನ್ನು ಆಯಾ ಜಿಲ್ಲೆಗಳ ಕೃಷಿ ವಿಜ್ಞಾನ ಕೇಂದ್ರಗಳ ಮುಖ್ಯಸ್ಥರಿಗೆ ಅಥವಾ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರಗಳ ಮುಖ್ಯಸ್ಥರ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನ.
ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಗಳ ಕೃಷಿ ವಿಜ್ಞಾನ ಕೇಂದ್ರ ಅಥವಾ ಮೊ. 9480696314 ಗೆ ಸಂಪರ್ಕಿಸಬಹುದು ಎಂದು ರಾಯಚೂರು ಕೃ.ವಿ.ವಿ. ವಿಸ್ತರಣಾ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್