
ಬಾಗಲಕೋಟೆ, 23 ಅಕ್ಟೋಬರ್(ಹಿ.ಸ.) :
ಆ್ಯಂಕರ್ : ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 21 ರಿಂದ 23 ರವರೆಗೆ ನಡೆಯಲಿರುವ ತೋಟಗಾರಿಕೆ ಮೇಳದ ಪ್ರಯುಕ್ತ ಶ್ರೇಷ್ಠ ರೈತ, ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ರೈತರಿಗೆ ಮೇಳದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಆಸಕ್ತರು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವೆಬ್‌ಸೈಟ್: www.uhsbagalkot.karnataka.gov.in ನಲ್ಲಿ ಅಥವಾ ತೋಟಗಾರಿಕೆ ಮಹಾವಿದ್ಯಾಲಯ, ಕೊಪ್ಪಳ(ಮುನಿರಾಬಾದ) ಕಾಲೇಜಿಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆ ಪಡೆದು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ನವೆಂಬರ್ 5 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮುನಿರಾಬಾದಿನ ತೋಟಗಾರಿಕೆ ಮಹಾವಿದ್ಯಾಲಯದ ಕಚೇರಿಗೆ ಭೇಟಿ ನೀಡಬಹುದು ಎಂದು ಮುನಿರಾಬಾದ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಶಾಂತಪ್ಪ ತಿರಕಣ್ಣನವರ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್