


ಬಳ್ಳಾರಿ, 23 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ರೈತರ ಜೀವನಾಡಿಯಾದ ತುಂಗಭದ್ರಾ ನದಿಗೆ ತಾಂತ್ರಿಕವಾಗಿ ಹೊಸ ಗೇಟ್ ಅಳವಡಿಕೆಯೊಂದಿಗೆ ಎರಡನೆ ಬೇಳೆಗೆ ನೀರು ಬಿಡಬೇಕು. ಈಗಾಗಲೆ ಎರಡನೆ ಬೆಳೆಗೆ ನೀರಿನ ವಿಷಯ ಕುರಿತು ರೈತರು ಆತಂಕದಲ್ಲಿದ್ದಾರೆ. ಅಲ್ಲದೆ ಅತಿಯಾದ ಮಳೆಯಿಂದಾಗಿ ಬೇಳೆನಷ್ಠ ವಾದ ರೈತರಿಗೆ ಅನ್ಯಾಯವಾಗದಂತೆ ಸಮರ್ಪಕ ಪರಿಹಾರ ನೀಡಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರೊಂದಿಗೆ ವಿಧಾನಪರಿಷತ್ ಸದಸ್ಯರಾದ ಬಸನಗೌಡ ಬಾದರ್ಲಿ ಅವರು ಸುದೀರ್ಘವಾಗಿ ಚರ್ಚಿಸಿದ್ದಾರೆ.
ಮಂತ್ರಾಲಯ ಶ್ರೀ ಗುರು ರಾಘವೇಂದ್ರ ದೇವರ ಆಶೀರ್ವಾದ ಪಡೆದು ನಂತರ ಪದ್ಮನಾಭ ವಸತಿ ಗೃಹದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರೊಂದಿಗೆ ಬಸನಗೌಡ ಬಾದರ್ಲಿ ಚರ್ಚಿಸಿದರು.
ಸುಮಾರು 70 ವರ್ಷಗಳ ಇತಿಹಾಸವಿರುವ ಈ ತುಂಗಭದ್ರಾ ಆಣೇಕಟ್ಟಿನ ಸಂರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ. ಈ ಹಿಂದೆ ಜರುಗಿದ ಘಟನೆಯಂತೆ ಮುಂದೆ ಯಾವುದೇ ರೀತಿಯ ಅಹಿತಕರ ಘಟನೆಗಳು ಜರಗದಂತೆ ತಾಂತ್ರಿಕವಾಗಿ ಹೊಸ ಗೇಟ್ ಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಬೇಕಾಗಿದೆ.
ನದಿಗೆ ಹೊಸ ಗೇಟ್ ಅಳವಡಿಕೆ ವಿಚಾರದಿಂದ ಎರಡನೆ ಬೆಳೆಗೆ ನೀರು ಬರುವುದಿಲ್ಲ ಎಂಬ ಆತಂಕದಲ್ಲಿದ್ದಾರೆ. ತಾಂತ್ರಿಕವಾಗಿ ಗೇಟ್ ಅಳವಡಿಕೆಯೊಂದಿಗೆ ಎರಡನೆ ಬೆಳೆಗೆ ನೀರು ಬಿಡುಗಡೆ ಮಾಡಿ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಮಾಹಿತಿ ನೀಡಿದರು.
ಜಿಲ್ಲೆಯಾದ್ಯಂತ ಅತಿಯಾದ ಮಳೆಯಿಂದಾಗಿ ರೈತರು ಬಿತ್ತಿದ ಬೆಳೆ ಗಳು ನೀರು ಪಾಲಾಗಿದೆ. ಈಗಾಗಲೆ ಸರ್ಕಾರದ ಆದೇಶದಂತೆ ಬೆಳೆ ಹಾನಿ ಕುರಿತು ಅಧಿಕಾರಿಗಳು ಸಮೀಕ್ಷೆ ನಡೆಸುತ್ತಿದ್ದಾರೆ.
ರೈತರಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗದಂತೆ, ಹಾನಿಯಾದ ಬೆಳೆಗೆ ನ್ಯಾಯಯುತವಾಗಿ ಪರಿಹಾರ ನೀಡಬೇಕಾಗಿದೆ ಎಂದು ಡಿಸಿಎಂ ಅವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಎನ್ಎಸ್ ಬೋಸರಾಜು, ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್, ಸಂಸದ ಕುಮಾರ ನಾಯಕ, ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಹಂಪಯ್ಯ ನಾಯಕ್, ಮಸ್ಕಿ ಕ್ಷೇತ್ರದ ಶಾಸಕರಾದ ಬಸನಗೌಡ ತುರುವಿಹಾಳ, ರೈತ ಮುಖಂಡರಾದ ಚಾಮರಸ ಪಾಟೀಲ್ ಸೇರಿ ಅನೇಕರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್