
ಸಿರುಗುಪ್ಪ, 23 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಿರುಗುಪ್ಪ ತಾಲೂಕಿನಾದ್ಯಂತ ಸುರಿದ ಭಾರೀ ಮಳೆ ಮತ್ತು ಗಾಳಿಯಿಂದ ಭತ್ತದ ಬೆಳೆ ಹಾಳಾಗಿದ್ದು ರೈತರು ತೀವ್ರವಾಗಿ ಕಂಗಾಗಲಾಗಿದ್ದಾರೆ. ಸರ್ಕಾರ ಕೂಡಲೇ ಬೆಳೆ ನಷ್ಟದ ಸಮೀಕ್ಷೆ ನಡೆಸಿ, ಬೆಳೆ ನಷ್ಟ ಪರಿಹಾರವನ್ನು ಘೋಷಣೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಸಿರುಗುಪ್ಪ ತಾಲೂಕಿನ ದಾಸಾಪುರ, ಸಿರಿಗೇರಿ, ತೆಕ್ಕಲಕೋಟೆ, ಕೊಂಚಿಗೇರಿ ಮತ್ತು ಹಾವಿನಾಳ ಸೇರಿ ಹಲವಾರು ಗ್ರಾಮಗಳ ರೈತರು ಬೆಳೆದಿದ್ದ ಸಾವಿರಾರು ಎಕರೆ ಪ್ರದೇಶದ ಭತ್ತದ ಬೆಳೆ ಸಂಪೂರ್ಣವಾಗಿ ನೆಲಕಚ್ಚಿದೆ. ಮುಂದಿನ ಹದಿನೈದು ದಿನಗಳಲ್ಲಿ ಭತ್ತದ ಕಟಾವು ಮಾಡುವ ಸಿದ್ಧತೆಯಲ್ಲಿರುವ ರೈತರಿಗೆ ಬೆಳೆ ನೆಲ ಕಚ್ಚಿರುವುದು ಚಿಂತೆಗೆ ಈಡುಮಾಡಿದೆ.
ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು ಮತ್ತು ತಹಶೀಲ್ದಾರರು ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ರೈತರ ಪರಿಸ್ಥಿತಿಯನ್ನು ಅವಲೋಕಿಸಿ ತಕ್ಷಣವೇ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್