


ರಾಯಚೂರು, 23 ಅಕ್ಟೋಬರ್(ಹಿ.ಸ.) :
ಆ್ಯಂಕರ್ : ಜಯಂತ್ಯುತ್ಸವದ ಅಂಗವಾಗಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರ ಮೆರವಣೆಗೆಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ತು ಸಭಾ ನಾಯಕರಾದ ಎನ್.ಎಸ್.ಬೋಸರಾಜು ಅವರು ಚಾಲನೆ ನೀಡಿದರು.
ನಗರದ ಬಸವೇಶ್ವರ ವೃತ್ತದಲ್ಲಿ ಅ.23 ರಂದು ನಡೆದ ಕಾರ್ಯಕ್ರಮದಲ್ಲಿ ಸಚಿವರು, ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಇದೆ ವೇಳೆ, ಜಗಜ್ಯೋತಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಅಲ್ಲಿಂದ ಆರಂಭಗೊ0ಡ ಮೆರವಣಿಗೆಯು ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ರಂಗಮ0ದಿರಕ್ಕೆ ಬಂದು ಸೇರಿತು.
ಮೆರವಣಿಗೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ರಾಯಚೂರು ಮಹಾನಗರ ಪಾಲಿಕೆಯ ಆಡಳಿತ ವಿಭಾದ ಉಪ ಆಯುಕ್ತರಾದ ಸಂತೋಷ ರಾಣಿ, ಸಮಾಜದ ಮುಖಂಡರಾದ ಚಂದ್ರಶೇಖರ ಪಾಟೀಲ್ ಮಿರ್ಜಾಪುರ, ಹರಿವಿ ನಾಡಗೌಡ, ನಿರ್ಮಲ ಬೆಣ್ಣೆ, ವಿಜಯಲಕ್ಷ್ಮಿ ದೇಸಾಯಿ, ಮಹಾಂತೇಶ್ ಪಾಟೀಲ್, ಈರಮ್ಮ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ದಂಡಪ್ಪ ಬಿರಾದಾರ್ ಸೇರಿದಂತೆ ಪಾಲಿಕೆಯ ಸದಸ್ಯರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್