



ಬಳ್ಳಾರಿ, 23 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬ್ರಿಟಿಷರ ವಿರುದ್ಧ ಹೋರಾಡಿದ್ದ ಕೆಚ್ಚೆದೆಯ ಸ್ವಾತಂತ್ರ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರು ಅನೇಕ ವೀರ ಮಹಿಳೆಯರಿಗೆ ಪ್ರೇರಣೆಯಾಗಿದ್ದಾರೆ ಎಂದು ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಚಯದ ಹೊಂಗಿರಣದ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಜೀವನದಲ್ಲಿ ಹೋರಾಟ ಮತ್ತು ಭೌತಿಕವಾದ ಶಕ್ತಿ ಇರಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರ ಚಿಂತನೆ ಮತ್ತು ಆದರ್ಶ ವಿಚಾರಗಳನ್ನು ಪಾಲಿಸಿ ಮೌಲ್ಯಯುತ ಬದುಕನ್ನು ರೂಪಿಸಿಕೊಳ್ಳೋಣ ಎಂದು ಕರೆ ನೀಡಿದರು.
ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷö್ಮಣ ಅವರು ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ಹೋರಾಡಿದ ವೀರ ಮಹಿಳೆ ಎನೆಸಿಕೊಂಡಿದ್ದರು. ಸಮಾಜಕ್ಕೆ ಅವರು ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರು ಸಾರಿದ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ನೀತಿಯನ್ನು ನಾವು ಅಳವಡಿಸಿಕೊಂಡಿದ್ದರೆ ಬ್ರಿಟಿಷರು ನಮ್ಮ ದೇಶಕ್ಕೆ ಬಂದು ದಾಳಿ ಮಾಡುತ್ತಿರಲ್ಲಿಲ್ಲ. ನಾವು ನಮ್ಮ ಮನಸಲ್ಲಿ ಮನೋವಾದ ತುಂಬಿಕೊ0ಡಿದ್ದೇವೆ. ಜಾತಿ, ಧರ್ಮ, ಭೇದ-ಭಾವವಿಲ್ಲದೆ ನಾವೆಲ್ಲರೂ ಒಗ್ಗಟ್ಟಾಗಿ ಜೀವನ ನಡೆಸಬೇಕು ಎಂದರು.
ಮೋಕಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಕಲಾವತಿ ಬಿ.ಜಿ ಮಾತನಾಡಿ, ಶ್ರೇಷ್ಠ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರು ಕೇವಲ ತಮ್ಮ ಸಮುದಾಯಕ್ಕೆ ಸೀಮಿತವಾಗಿರದೇ, ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ ಹೋರಾಟಗಾರ್ತಿಯಾಗಿದ್ದಾರೆ. ನಮ್ಮ ದೇಶದ ಸ್ವಾತಂತ್ರö್ಯ ದಿನಾಚರಣೆಯಲ್ಲಿ ಪ್ರಸಿದ್ಧ ಕಪ್ಪ ಕಾಣಿಕೆಯ ಪ್ರಸಂಗ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಅವರ ವೇಷ ಭೂಷಣ ಧರಿಸುವುದು ವಿಶೇಷವಾಗಿದೆ ಎಂದು ಹೇಳಿದರು.
ಕಿತ್ತೂರು ಚೆನ್ನಮ್ಮ ಅವರು 1778 ರ ಅಕ್ಟೋಬರ್ 23 ರಂದು ಬೆಳಗಾವಿ ಜಿಲ್ಲೆಯ ಕಾಕತಿ ಎಂಬ ಸಣ್ಣ ಹಳ್ಳಿಯಲ್ಲಿ ತಂದೆ ದೂಳಪ್ಪ, ತಾಯಿ ಪದ್ಮಾವತಿ ಮಗಳಾಗಿ ಜನಿಸಿದರು. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಅವರು ಚಿಕ್ಕಂದಿನಿ0ದಲೇ ಕುದುರೆ ಸವಾರಿ, ಕತ್ತಿವರಸೆ ಮತ್ತು ಬಿಲ್ಲುಗಾರಿಕೆಯಲ್ಲಿ ತರಬೇತಿ ಪಡೆದಿದ್ದರು. ಅವರು ದೇಸಾಯಿ ಮನೆತನದ ರಾಜಾ ಮಲ್ಲಸರ್ಜ ಅವರನ್ನು 15 ನೇ ವಯಸ್ಸಿನಲ್ಲಿ ವಿವಾಹವಾದರು ಎಂದು ಅವರ ಜೀವನದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಬಳ್ಳಾರಿಯ ಕು.ಜಯಲಕ್ಷಿಎಂ.ಎಸ್ ಅವರು ವಚನ ಸಂಗೀತ ಪ್ರಸ್ತುತ ಪಡಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.
ಸ್ವಾತಂತ್ರö್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಯು ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರದೊಂದಿಗೆ ವಿವಿಧ ಕಲಾ ವಾದ್ಯಗಳ ಮೂಲಕ ನಗರದ ಮುನ್ಸಿಪಾಲ್ ಕಾಲೇಜು ಮೈದಾನದಿಂದ ಆರಂಭಗೊ0ಡು ಇಂದಿರಾ ವೃತ್ತ, ಡಾ.ರಾಜ್ ಕುಮಾರ್ ರಸ್ತೆಯ ಮೂಲಕ ಸಾಂಸ್ಕೃತಿಕ ಸಮುಚ್ಚಯ ಸಂಭಾಗಣ ಕಾರ್ಯಕ್ರಮದವರೆಗೆ ತಲುಪಿ ಸಂಪನ್ನಗೊ0ಡಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬಿ.ನಾಗರಾಜ, ಬಳ್ಳಾರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಗೋನಾಳ್ ಎಂ.ನಾಗಭೂಷಣ, ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಪಂಪನಗೌಡ ಸೇರಿದಂತೆ ಸಮಾಜದ ಮುಖಂಡರು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್