
ಕೊಪ್ಪಳ, 24 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಡಿಸೆಂಬರ್ 21 ರಿಂದ 23 ರ ವರೆಗೆ ಮೌಲ್ಯವರ್ಧನೆ ಮತ್ತು ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆ ಎಂಬ ಧ್ಯೇಯದೊಂದಿಗೆ ತೋಟಗಾರಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ತೋಟಗಾರಿಕಾ ಮೇಳದಲ್ಲಿ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ರಾಜ್ಯದ 24 ಜಿಲ್ಲೆಗಳಿಗೆ ಪ್ರತಿ ಒಬ್ಬರಂತೆ ಶ್ರೇಷ್ಠ ತೋಟಗಾರಿಕಾ ರೈತ ಅಥವಾ ರೈತ ಮಹಿಳೆಯರನ್ನು ಆಯ್ಕೆ ಮಾಡಿ ಸೂಕ್ತ ಬಹುಮಾನದೊಂದಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು.
ಈ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಲು ಬಯಸುವ ರೈತ, ರೈತ ಮಹಿಳೆಯರು ಅರ್ಜಿ ನಮೂನೆ ಅನುಬಂಧ-1 ರಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಅಂತರ್ಜಾಲದ www.uhsbagalkot.karnataka.gov.in ಮೂಲಕ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ನವೆಂಬರ್ 5 ರೊಳಗಾಗಿ ಸಲ್ಲಿಸಬೇಕು.
ಮಾರ್ಗಸೂಚಿಗಳನ್ವಯ ಅರ್ಜಿದಾರರು ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದ ಯಾವುದೇ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಮತ್ತು ಐಸಿಎಆರ್ ಪ್ರಶಸ್ತಿಗಳನ್ನು ತಮ್ಮ ಹಾಗೂ ತಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಪಡೆದಿರಬಾರದು. ನಿಗದಿತ ಅರ್ಜಿ ನಮೂನೆಯಲ್ಲಿ ಸಂಪೂರ್ಣ ವಿವರಗಳನ್ನು ಒಳಗೊಂಡ ಮಾಹಿತಿಯನ್ನು ನೀಡಬೇಕು. ಸಲ್ಲಿಕೆಯಾದ ಅರ್ಜಿಗಳನ್ನು ಆಯ್ಕೆ ಸಮಿತಿಯು ಪರಿಶೀಲಿಸಿ ಕಿರುಪಟ್ಟಿ ಮಾಡಿದ ಮೂರು ಕ್ಷೇತ್ರಗಳಿಗೆ ಮಾತ್ರ ಕ್ಷೇತ್ರ ವೀಕ್ಷಣೆ ಕೈಗೊಳ್ಳಲಾಗುವುದು. ಆಯ್ಕೆಯು ವಿಶ್ವವಿದ್ಯಾಲಯದ ನಿಯಮ ಹಾಗೂ ಆಯ್ಕೆ ಸಮಿತಿಯ ನಿರ್ಧಾರಕ್ಕೆ ಒಳಪಟ್ಟಿರುತ್ತದೆ.
ಹೆಚ್ಚಿನ ವಿವರಗಳಿಗಾಗಿ ಡಾ. ಮೌಲಾಸಾಬ, ಪ್ರಾಧ್ಯಾಪಕರು ಹಾಗೂ ವಿಸ್ತರಣಾ ಮುಂದಾಳು ತೋಟಗಾರಿಕೆ ಮಹಾವಿದ್ಯಾಲಯ, ಮುನಿರಾಬಾದ, ಮೊ.ಸಂ.9448796380, ಡಾ.ವೆಂಕಟೇಶಲು, ವಿಸ್ತರಣಾ ನಿರ್ದೇಶಕರು, ತೋಟಕಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ, ಬಾಗಲಕೋಟ ಇವರ ಮೊಬೈಲ್ ಸಂ. 9480696381, 08354-230101, ಡಾ. ದೀಪಾ ತೇರದಾಳ, ಸಹಾಯಕ ಪ್ರಾಧ್ಯಾಪಕರು, ಮೊ. ಸಂ.7899285785, ಡಾ. ವೀರೇಶ ಹಿರೇಮಠ, ಸಹಾಯಕ ಪ್ರಾಧ್ಯಾಪಕರು ಹಾಗೂ ತಾಂತ್ರಿಕ ಅಧಿಕಾರಿಗಳು ಮೊ.ಸಂ. 8660390753, ಶ್ರೀಪಾದ ವಿ. ಸಹಾಯಕ ಪ್ರಾಧ್ಯಾಪಕರು, ಮೊ.ಸಂ. 9448344103, ಎಮ್.ಎ.ವಾಸೀಮ್, ಸಹಾಯಕ ಪ್ರಾಧ್ಯಾಪಕರು, ಮೊ.ಸಂ.7259793847, ಪಿ.ಬಿ.ದೇಸೂರ, ಸಹಾಯಕ ಆಡಳಿತಾಧಿಕಾರಿಗಳು, ಮೊ.ಸಂ.8884612692 ಇವರನ್ನು ಅಥವಾ ಇ-ಮೇಲ್ ವಿಳಾಸ ಸಂಪರ್ಕಿಸಬಹುದು.
ಅರ್ಜಿಸಲ್ಲಿಸಲು ಇಚ್ಚಿಸುವ ಜಿಲ್ಲೆಯ ರೈತ ಬಾಂಧವರು ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕರ ಕೃಷಿ ನಿರ್ದೇಶಕರ ಕಛೇರಿಗೆ ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್. ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್