
ಬೆಂಗಳೂರು, 24 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಆಶಾ ಕಾರ್ಯಕರ್ತೆಯರ ಗೌರವಧನವನ್ನ ₹8,000ಕ್ಕೆ ಹೆಚ್ಚಳ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ, ಗೌರವಧನ ಹೆಚ್ಚಿಸುವುದಿರಲಿ, ಕಳೆದ ಮೂರು ತಿಂಗಳಿಂದ ಕೊಡಬೇಕಾದ ಗೌರವಧನವನ್ನೂ ಕೊಟ್ಟಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ, ವಿಪಕ್ಷಗಳು ಸರ್ಕಾರ ದಿವಾಳಿ ಆಗಿದೆ ಎಂದು ಟೀಕೆ ಮಾಡಿದಾಗಲೆಲ್ಲ ಎಲ್ಲ ಸರಿಯಿದೆ ಎಂದು ತಿಪ್ಪೆ ಸಾರಿಸುವ ಮಾತಾಡುತ್ತೀರಲ್ಲ ಸ್ವಾಮಿ, ಸರ್ಕಾರ ಪಾಪರ್ ಆಗಿಲ್ಲ ಎನ್ನುವುದಾದರೆ 42,000 ಆಶಾ ಕಾರ್ಯಕರ್ತೆಯರಿಗೆ ಸಿಗಬೇಕಾದ ₹63 ಕೋಟಿ ರೂಪಾಯಿ ಗೌರವಧನ ಯಾಕೆ ಬಾಕಿ ಉಳಿಸಿಕೊಂಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ.
ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ ಎಂದು ಅಶೋಕ ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa