ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನ ; ಇಂದು ವಿಚಾರಣೆ
ಕಲಬುರಗಿ, 24 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿವಾದ ಇದೀಗ ನ್ಯಾಯಾಲಯದ ಮೆಟ್ಟಿಲೇರಿದೆ. ಆರ್‌ಎಸ್‌ಎಸ್‌ ನವೆಂಬರ್‌ 2 ರಂದು ಪಥಸಂಚಲನ ನಡೆಸಲು ಅರ್ಜಿ ಸಲ್ಲಿಸಿದರೆ, ಭೀಮ್ ಆರ್ಮಿ, ದಲಿತ್ ಪ್ಯಾಂಥರ್, ಕುರುಬ ಸಂಘಟನೆ, ಹಸಿರ
Rss


ಕಲಬುರಗಿ, 24 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿವಾದ ಇದೀಗ ನ್ಯಾಯಾಲಯದ ಮೆಟ್ಟಿಲೇರಿದೆ. ಆರ್‌ಎಸ್‌ಎಸ್‌ ನವೆಂಬರ್‌ 2 ರಂದು ಪಥಸಂಚಲನ ನಡೆಸಲು ಅರ್ಜಿ ಸಲ್ಲಿಸಿದರೆ, ಭೀಮ್ ಆರ್ಮಿ, ದಲಿತ್ ಪ್ಯಾಂಥರ್, ಕುರುಬ ಸಂಘಟನೆ, ಹಸಿರು ಸೇನೆ ಮತ್ತು ಕ್ರಿಶ್ಚಿಯನ್ ವೆಲ್ಫೇರ್‌ ಸೊಸೈಟಿ ಕೂಡ ಅಂದೇ ಕಾರ್ಯಕ್ರಮಕ್ಕೆ ಅರ್ಜಿ ಹಾಕಿವೆ.

ತಹಶೀಲ್ದಾರ್‌ ಕಾನೂನು ಸುವ್ಯವಸ್ಥೆ ಕಾರಣ ನೀಡಿ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಿದ್ದು, ವಿಚಾರಣೆ ಇಂದು ಮಧ್ಯಾಹ್ನ 3.30ಕ್ಕೆ ಕಲಬುರಗಿ ಉಚ್ಚ ನ್ಯಾಯಾಲಯದಲ್ಲಿ ನಡೆಯಲಿದೆ. ಎಲ್ಲ ಸಂಘಟನೆಗಳ ಅರ್ಜಿಗಳನ್ನು ಒಂದೇ ವೇಳೆ ಪರಿಗಣಿಸಲಾಗಿದ್ದು, ನ್ಯಾಯಾಲಯದ ತೀರ್ಪಿನತ್ತ ಎಲ್ಲರ ಗಮನ ನೆಟ್ಟಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande