
ವಿಜಯಪುರ, 24 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಡಿಸಿಎಂ ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲು ಅವಕಾಶ ಕೊಡಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.
ವಿಜಯಪುರ ನಗರದಲ್ಲಿ ಮಾಧ್ಯಮದ ಎದುರು ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾನೇ ಐದು ವರ್ಷ ಮುಖ್ಯಮಂತ್ರಿ ಅಂತಾ ಹೇಳ್ತಾರೆ. ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಮುಖ್ಯಮಂತ್ರಿ ಬಗ್ಗೆ ಮಾತನಾಡುತ್ತಾರೆ. ಅದಕ್ಕಾಗಿ ಯತೀಂದ್ರ ವಿರುದ್ಧ ಕ್ರಮ ಕೈಗೊಳ್ಳೊಕೆ ಡಿಕೆಶಿಗೆ ತಾಕತ್ತು ಇಲ್ವಾ..? ಎಂದು ಗುಡುಗಿದರು.
ರಾಮನಗರ ಶಾಸಕ ಯತಿಂದ್ರ ಹೇಳಿಕೆಯನ್ನು ಎಳಸು ಹೇಳಿಕೆ ಎಂದಿದ್ದಾನೆ. ಯತಿಂದ್ರ ಅಷ್ಟು ಬುದ್ಧಿವಂತನಾ..? ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈವಾಡ ಇದೆ ಎಂದು ಪರೋಕ್ಷವಾಗಿ ಟಾಂಗ್ ನೀಡಿದರು.
ಯಾವ ಕಾರಣಕ್ಕೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲು ಅವಕಾಶ ಕೊಡಲ್ಲ. ಡಿ.ಕೆ.ಶಿ ಸುಮ್ಮನೆ ಕುಳಿತುಕೊಳ್ಳುವ ಹುಳು ಅಲ್ಲ. ಕಾಂಗ್ರೆಸ್ ಸರ್ಕಾರ ಎಷ್ಟು ದಿನ ಕುಟುಕುಟು ಅಂತಾ ಇರುತ್ತೇ ಗೊತ್ತಿಲ್ಲ. ಕರ್ನಾಟಕದ ಜನತೆಗೆ ರಾಜ್ಯ ಸರ್ಕಾರ ಹಿಂಸೆ ಕೊಡುತ್ತಿದೆ. ಯಾವುದೇ ಅಭಿವೃದ್ಧಿ ಕೆಲಸವನ್ನು ಸರ್ಕಾರ ಮಾಡಿಲ್ಲ. ಗುಂಡಿಗಳನ್ನು ಮುಚ್ಚಲು ಖಾಸಗಿ ಕಂಪನಿಯವರು ಬರುತ್ತಿದ್ದಾರೆ. ಅದಕ್ಕಾಗಿ ಈ ಸರ್ಕಾರ ಸತ್ತು ಹೋಗಿದೆ. ಆದ್ರೂ, ಮುಖ್ಯಮಂತ್ರಿ ಸ್ಥಾನಕ್ಕೆ ಬಡಿದುಕೊಳ್ತಾ ಇದ್ದಾರೆ.
ಈ ಸರ್ಕಾರ ಬಹಳ ದಿನ ಇರೋದಿಲ್ಲ ಎಂದರು.
ಹಿಂದೂಸ್ತಾನ್ ಸಮಾಚಾರ್ / jyothi deshpande