
ಬೆಂಗಳೂರು, 24 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸು ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಚಿನ್ನಟೆಕೂರು ಬಳಿ ಸಂಭವಿಸಿದ ಅಗ್ನಿ ದುರಂತದಲ್ಲಿ ಅನೇಕರು ಸಾವನ್ನಪ್ಪಿರುವ ಸುದ್ದಿ ದುಃಖಕರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸೂಚಿಸಿರುವ ಅವರು, ಈ ದುರಂತದಲ್ಲಿ ಮೃತರಾದವರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿತ್ತೇನೆ. ರಾಜ್ಯ ಸರ್ಕಾರದಿಂದ ಸ್ಥಳೀಯ ಆಡಳಿತಕ್ಕೆ ಅಗತ್ಯ ನೆರವು ನೀಡಲಿ ಎಂದು ವಿನಂತಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa