
ರಾಯಚೂರು, 24 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮತದಾರರ ಪಟ್ಟಿ ಸಿದ್ಧಪಡಿಸುವ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾರರ ನೋಂದಣಿ ಮಾಡುವ ಸಂದೇಶ ನೀಡುವ ನಿಟ್ಟಿನಲ್ಲಿ ವಿಶೇಷ ಮಿಂಚಿನ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಈಶ್ವರ್ ಕುಮಾರ್ ಕಾಂದೂ ಅವರು ತಿಳಿಸಿದ್ದಾರೆ.
ವಿಶೇಷ ಮಿಂಚಿನ ನೋಂದಣಿ ಅಭಿಯಾನವು ಜಿಲ್ಲೆಯಲ್ಲಿ ಅಕ್ಟೋಬರ್ 27, 30 ಹಾಗೂ ನವಂಬರ್ 03ರಂದು ಹಮ್ಮಿಕೊಂಡಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಮತದಾರರ ನೋಂದಣಿ ಮಾಡಬೇಕು. ಅಲ್ಲದೆ ವಿಶೇಷ ಮಿಂಚಿನ ನೋಂದಣಿ ಅಭಿಯಾನ ಕಾರ್ಯಕ್ರಮಗಳನ್ನು ವಾಟ್ಸಾಪ್, ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮೂಲಕ ವ್ಯಾಪಕ ಪ್ರಚಾರ ಮಾಡಿ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮತದಾರರ ಪಟ್ಟಿ ಸಿದ್ಧತೆಗೆ ಸಹಕರಿಸಬೇಕು.
ವಿಶೇಷ ಮಿಂಚಿನ ನೋಂದಣಿ ಅಭಿಯಾನ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್