
ನವದೆಹಲಿ, 24 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಆಂಧ್ರ ಪ್ರದೇಶದ ಕರ್ನೂಲ್ ಬಳಿ ಸಂಭವಿಸಿದ ಬಸ್ ಅಪಘಾತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂತಾಪ ಸಂದೇಶ ಹಂಚಿಕೊಂಡಿರು ಅವರು, ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ ಎಂದು ತಿಳಿದು ತುಂಬಾ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.
ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa