

ಸಿರವಾರ, 24 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಗ್ಯಾರಂಟಿ ಯೋಜನೆಗಳೊಂದಿಗೆ ಜನಪರ ಕಾರ್ಯಕ್ರಮಗಳ ಮೂಲಕ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ. ಭೂಮಿ ಪೂಜೆ ನೆರವೇರಿಸಿದ ಕಾಮಗಾರಿಗಳನ್ನು ಅಧಿಕಾರಿಗಳು ತ್ವರಿತಗತಿಯಲ್ಲಿ ಗುಣಮಟ್ಟದೊಂದಿಗೆ ನಿರ್ವಹಿಸಬೇಕು ಎಂದು ಸಚಿವ ಎನ್ ಎಸ್ ಬೋಸರಾಜು ಅವರು ತಿಳಿಸಿದರು.
ಮಾನ್ವಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಿರ್ವಾರ ಪಟ್ಟಣದ ವಾರ್ಡ್ ನಂ 4 ರಲ್ಲಿ ಕೆಕೆಆರ್ಡಿಬಿ ಮೈಕ್ರೋ ಯೋಜನೆ ಅಡಿಯಲ್ಲಿ 50 ಲಕ್ಷ ರೂ ನ ಸಮುದಾಯ ಭವನ ನಿರ್ಮಾಣ ಕಾಮಗಾರಿ ಹಾಗೂ ಸಿರವಾರ ತಾಲೂಕಿನ ಮೂರ್ಖ ಗುಡ್ಡ ಗ್ರಾಮದಲ್ಲಿ ಕೆಕೆಆರ್‌ಡಿಬಿ ಮ್ಯಾಕ್ರೋ ಯೋಜನೆ ಅಡಿಯಲ್ಲಿ 35 ಲಕ್ಷ ರೂನ ಸಮುದಾಯ ಭವನ ನಿರ್ಮಾಣ ಕಾಮಗಾರಿ, ಅಪೆಂಡಿಕ್ಸ್ ಯೋಜನೆ ಅಡಿಯಲ್ಲಿ ಯು ಗುಡದಿನ್ನಿಯ ರಾ.ಹೆ ಕೀ 34 ರಿಂದ 38 ಕಿ ಮಿ ವರಗೆ 3 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಸಚಿವ ಎನ್ಎಸ್ ಬೋಸರಾಜು ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ ಅವರು ಭೂಮಿ ಪೂಜೆ ನೆರವೇರಿಸಿದರು.
ಮಾನ್ವಿ ವಿಧಾನ ಸಭಾ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಹಂತ ಹಂತವಾಗಿ ಇನ್ನು ಹೆಚ್ಚಿನ ಅನುದಾನವನ್ನು ಮೀಸಲಿಡುವ ಮೂಲಕ ಗ್ರಾಮೀಣ ಭಾಗದ ಅಭಿವೃದ್ದಿಗೆ ಪ್ರಯತ್ನಿಸಲಾಗುತ್ತಿದೆ. ಕಲ್ಯಾಣ ಭಾಗದ ವಿವಿಧ ಪ್ರದೇಶಗಳ ಶೈಕ್ಷಣಿಕ, ಆರೋಗ್ಯದ ಹೆಚ್ಚಿನ ಅಭಿವೃದ್ಧಿಗೆ ಸೇರಿ ಗ್ರಾಮೀಣ ಭಾಗಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಯ ಮಂಡಳಿಯಿಂದ ಹೆಚ್ಚಿನ ಅನುದಾನವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು.
ನಾವು ನಮ್ಮ ಅಧಿಕಾರಾವಧಿಯಲ್ಲಿ ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಹಳ್ಳಿಗೂ ಜನರ ಬೇಡಿಕೆ ಅನುಗಿಣವಾಗಿ ಅನುದಾನ ನೀಡುತ್ತಿದ್ದೇವೆ. ಸರ್ಕಾರದ ಅನುದಾನವನ್ನು ಸಾರ್ವಜನಿಕರು ಸದುಪಯೋಗ ಪಡೆಸಿಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಚುಕ್ಕಿ ಸೂಗಪ್ಪ ಸಾಹುಕಾರ್, ಶರಣಯ್ಯ ನಾಯಕ, ಬ್ರಿಜ್ಜೆಶ ಪಾಟೀಲ್, ರುದ್ರಪ್ಪ ಅಂಗಡಿ, ಮಹಿಳಾ ಕಾಂಗ್ರೆಸ್ ಅದ್ಯಕ್ಷರಾದ ನಿರ್ಮಲಾ ಬೆಣ್ಣಿ, ಶಿವಕುಮಾರ ಚುಕ್ಕಿ, ದಾನಗೌಡ, ಅರಕೇರಾ ಶಿವಕುಮಾರ್, ಹಸನ್ ಅಲೀ, ಹೆಚ್ ಕೆ ಅಮರೇಶ, ನಾಗಪ್ಪ, ದುರುಗಣ್ಣ ನಾಯಕ, ನಾಗರಾಜ, ಬಸವರಾಜ ಕಲ್ಲೂರು, ವಾಸು ಬಾಬು, ಸುಬ್ಬರಾವ್, ರಡ್ಡೆಪ್ಪ ತಾಂಡ, ಅಮರೇಶ ತಾಯಣ್ಣ ನಾಯ್ಕ ಸೇರಿದಂತೆ ಅನೇಕರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್