ಕೌಶಲ್ಯಾಧಾರಿತ ತರಬೇತಿ ; ಯುವನಿಧಿ ಫಲಾನುಭವಿಗಳನ್ನು ನೋಂದಾಯಿಸಿ : ರೆಡ್ಡಿ ಶ್ರೀನಿವಾಸ
ಕೊಪ್ಪಳ, 24 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಸರ್ಕಾರದಿಂದ ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ ನೀಡುತ್ತಿರುವ ಕೌಶಲ್ಯಾಧಾರಿತ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಯುವನಿಧಿ ಫಲಾನುಭವಿಗಳನ್ನು ನೋಂದಾಯಿಸಬೇಕೆ0ದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ
ಕೌಶಲ್ಯಾಧಾರಿತ ತರಬೇತಿ : ಯುವನಿಧಿ ಫಲಾನುಭವಿಗಳನ್ನು ನೋಂದಾಯಿಸಿ: ರೆಡ್ಡಿ ಶ್ರೀನಿವಾಸ


ಕೌಶಲ್ಯಾಧಾರಿತ ತರಬೇತಿ : ಯುವನಿಧಿ ಫಲಾನುಭವಿಗಳನ್ನು ನೋಂದಾಯಿಸಿ: ರೆಡ್ಡಿ ಶ್ರೀನಿವಾಸ


ಕೌಶಲ್ಯಾಧಾರಿತ ತರಬೇತಿ : ಯುವನಿಧಿ ಫಲಾನುಭವಿಗಳನ್ನು ನೋಂದಾಯಿಸಿ: ರೆಡ್ಡಿ ಶ್ರೀನಿವಾಸ


ಕೌಶಲ್ಯಾಧಾರಿತ ತರಬೇತಿ : ಯುವನಿಧಿ ಫಲಾನುಭವಿಗಳನ್ನು ನೋಂದಾಯಿಸಿ: ರೆಡ್ಡಿ ಶ್ರೀನಿವಾಸ


ಕೊಪ್ಪಳ, 24 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಸರ್ಕಾರದಿಂದ ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ ನೀಡುತ್ತಿರುವ ಕೌಶಲ್ಯಾಧಾರಿತ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಯುವನಿಧಿ ಫಲಾನುಭವಿಗಳನ್ನು ನೋಂದಾಯಿಸಬೇಕೆ0ದು ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಹೇಳಿದರು.

ಅವರು ಶುಕ್ರವಾರ ಕೊಪ್ಪಳ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬ0ಧ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯುವನಿಧಿ ಪ್ಲಸ್ ಕರ್ನಾಟಕ ಸರ್ಕಾರದ ಉಪಕ್ರಮವಾಗಿದ್ದು, ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ನೀಡಲಾಗುತ್ತಿದೆ. ಇದು ಅವರನ್ನು ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡುವ ಉದ್ದೇಶ ಹೊಂದಿದೆ. ಈ ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮವು ಯುವನಿಧಿ ಫಲಾನುಭವಿಗಳಿಗೆ ಉದ್ಯಮ-ಸಂಬ0ಧಿತ ಕೌಶಲ್ಯಗಳನ್ನು ಒದಗಿಸುವ ಮೂಲಕ ಅವರ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಈ ಉಪಕ್ರಮವು ಯುವನಿಧಿ ಫಲಾನುಭವಿಗಳಿಗೆ ವಿವಿಧ ಕೌಶಲ್ಯ ಕೋರ್ಸ್ಗಳ ಅಡಿಯಲ್ಲಿ ತರಬೇತಿ ನೀಡುವ ಗುರಿಯನ್ನು ಹೊಂದಿದ್ದು, ಜಿಲ್ಲೆಯ ಎಲ್ಲಾ ಯುವನಿಧಿ ಫಲಾನುಭವಿಗಳು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಳ್ಳುವುದರಿಂದ ಯಾವುದೇ ಯುವನಿಧಿ ಫಲಾನುಭವಿಯು ಯುವನಿಧಿ ಯೋಜನೆಯಿಂದ ದೂರ ಉಳಿಯುವುದಿಲ್ಲ. ಈ ಬಗ್ಗೆ ಅವರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದರು.

ಜಿಲ್ಲೆಯ ನ್ಯಾಯ ಬೆಲೆ ಅಂಗಡಿಗಳಲ್ಲಿ ಸುರಕ್ಷತೆ ದೃಷ್ಟಿಯಿಂದ ಸಿಸಿ ಕ್ಯಾಮರಾಗಳ ಅಳವಡಿಕೆ ಮಾಡಲು ಆದಷ್ಟು ಬೇಗ ಕ್ರಮ ಕೈಗೊಳ್ಳಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು ಹಾಗೂ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ನಾಮಫಲಕಗಳನ್ನು ಪ್ರದರ್ಶಿಸಬೇಕು. ಗ್ಯಾರಂಟಿ ಯೋಜನೆಗಳಿಗೆ ಎಲ್ಲಾ ಅಧಿಕಾರಿಗಳು ಹಾಗೂ ಜಿಲ್ಲೆಯ ಏಳು ತಾಲ್ಲೂಕಿನ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಸೂಚಿಸಿದರು.

ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ಪಡಿತರ ವಿತರಣಾ ಕೇಂದ್ರಗಳಲ್ಲಿ ಸರಕಾರದ ಅನ್ನಭಾಗ್ಯ ಯೋಜನೆ ಕುರಿತು ಸಿಎಂ, ಡಿಸಿಎಂ ಹಾಗೂ ಸಚಿವರ ಭಾವಚಿತ್ರವಿರುವ ಫಲಕ ಹಾಕಬೇಕು. ಜಿಲ್ಲೆಯ ಎಲ್ಲಾ ಬಸ್ ನಿಲ್ದಾಣಗಳಲ್ಲಿರುವ ಶೌಚಾಲಯ ವ್ಯವಸ್ಥೆ ಸರಿಪಡಿಸಿ ಸ್ವಚ್ಛತೆಯನ್ನು ಕಾಪಾಡಬೇಕು ಹಾಗೂ ಅಗತ್ಯವಿರುವ ಕಡೆಗೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಹೆಚ್ಚಿನ ಬಸ್ ವ್ಯವಸ್ಥೆ ಮಾಡಬೇಕೆಂದು ಕ.ಕ.ಸಾ. ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ವರದಿಯ ಕುರಿತು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್. ಬಿ. ಖಾದ್ರಿ, ಅಮರೇಶಪ್ಪ ಗಾಂಜಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಗ್ಯಾರಂಟಿ ಯೋಜನೆಗಳ ನೋಡಲ್ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ ಸೇರಿದಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರು, ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಧ್ಯಕ್ಷರು ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande