
ಕರ್ನೂಲ್, 24 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಛೇದಕದ ಬಳಿ ಇಂದು ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ. 20ಕ್ಕೂ ಹೆಚ್ಚುಜನರು ಸಾವನ್ನಪ್ಪಿದ್ದಾರೆ
ಬೆಂಗಳೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಕಾವೇರಿ ಟ್ರಾವೆಲ್ಸ್ ಬಸ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋಗಿದೆ.
ಬಸ್‌ನಲ್ಲಿದ್ದ ಸುಮಾರು 40 ಪ್ರಯಾಣಿಕರಲ್ಲಿ 12 ಮಂದಿ ತುರ್ತು ಬಾಗಿಲು ಮುರಿದು ಪಾರಾಗಿದ್ದು, ಉಳಿದವರಲ್ಲಿ ಬಹುತೇಕರು ಬೆಂಕಿಗೆ ಆಹುತಿಯಾಗಿದ್ದಾರೆ. 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಅಪಘಾತವು ಬೆಳಗಿನ ಜಾವ 3:30ರ ಸುಮಾರಿಗೆ ಸಂಭವಿಸಿದ್ದು, ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಹಾಗೂ ಪ್ರಯಾಣಿಕರು ತುರ್ತು ನೆರವಿಗಾಗಿ ಪೊಲೀಸ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಗಾಯಾಳುಗಳನ್ನು ಕರ್ನೂಲ್ ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಸ್ ಚಾಲಕ ಮತ್ತು ಸಹಾಯಕ ಇಬ್ಬರೂ ಪಾರಾಗಿದ್ದಾರೆ.
ಬಹುತೇಕ ಪ್ರಯಾಣಿಕರು ಹೈದರಾಬಾದ್ ಮೂಲದವರಾಗಿದ್ದು, ಅಪಘಾತದ ನಿಖರ ಕಾರಣ ಮತ್ತು ಮೃತರ ಗುರುತು ಪತ್ತೆಗೆ ತನಿಖೆ ಮುಂದುವರಿದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa