ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ತರಬೇತಿ ನೋಂದಣಿ
ಕೊಪ್ಪಳ, 24 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಹಾಗೂ ಅಕಾಡೆಮಿ ಫಾರ್ ಕ್ರಿಯೇಟಿವ್, ಬೆಂಗಳೂರು ರವರ ಸಂಯುಕ್ತಾಶ್ರಯದಲ್ಲಿ ರಾಷ್ಟç ಮಟ್ಟದ ಸಂಪನ್ಮೂಲ ವ್ಯಕ್ತಿಗಳಿಂದ 29 ವರ್ಷದ ಒಳಗಿನ ಪದವಿ ಹಾಗೂ ಸ್ನಾತಕೋತ್ತ
ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ತರಬೇತಿ ನೋಂದಣಿ


ಕೊಪ್ಪಳ, 24 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಹಾಗೂ ಅಕಾಡೆಮಿ ಫಾರ್ ಕ್ರಿಯೇಟಿವ್, ಬೆಂಗಳೂರು ರವರ ಸಂಯುಕ್ತಾಶ್ರಯದಲ್ಲಿ ರಾಷ್ಟç ಮಟ್ಟದ ಸಂಪನ್ಮೂಲ ವ್ಯಕ್ತಿಗಳಿಂದ 29 ವರ್ಷದ ಒಳಗಿನ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಯಶಸ್ಸು, ಸೃಜನಶೀಲತೆ, ನಾಯಕತ್ವ, ಸಂವಹನ ಕೌಶಲ್ಯ ಹಾಗೂ ಇನ್ನಿತರೆ ಮಹತ್ವದ ವಿಷಯ ಮತ್ತು ವಿಭಿನ್ನ ಚಟುವಟಿಕೆಗಳು ಹಾಗೂ ಸರ್ವಾಂಗೀಣ ಅಭಿವೃದ್ಧಿ ಕುರಿತು ನವೆಂಬರ್ 8 ಮತ್ತು 9 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ 2 ದಿನಗಳವರೆಗೆ ವಸತಿ ರಹಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಕ್ಯೂಆರ್ ಕೋಡ್‌ನ ಗೂಗಲ್ ಶೀಟ್‌ನಲ್ಲಿ ಕಡ್ಡಾಯವಾಗಿ ನೋಂದಣಿಯನ್ನು ಮಾಡಿಕೊಳ್ಳಬೇಕು. ತರಬೇತಿಯು ಯಾವುದೇ ತರಹದ ಶುಲ್ಕ ರಹಿತವಾಗಿದ್ದು, ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಮಧ್ಯಾಹ್ನದ ಊಟೋಪಹಾರದ ವ್ಯವಸ್ಥೆ ಇರುತ್ತದೆ ಹಾಗೂ ತರಬೇತಿಗೆ ಹಾಜರಾದ ವಿದ್ಯಾರ್ಥಿ, ವಿದ್ಯಾರ್ತಿನಿಯರಿಗೆ ತರಬೇತಿ ಮುಗಿದ ನಂತರ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ತರಬೇತಿಯನ್ನು ಜಿಲ್ಲೆಯ ಯುವಕ, ಯುವತಿಯರಿಗೆ ಮಾತ್ರ ನೀಡಲಾಗುವುದು. ತರಬೇತಿಯನ್ನು 60 ಯುವಜನರಿಗೆ ಆಯೋಜಿಸಲಾಗುವುದು. ತರಬೇತಿಯು 2 ದಿನಗಳ ಕಾಲ ಬೆಳಿಗ್ಗೆ 10 ಗಂಟೆ ಸಂಜೆ 5.30 ಗಂಟೆಯವರೆಗೆ ನಡೆಯುತ್ತದೆ. ತರಬೇತಿಗೆ ಹಾಜರಾಗುವ ಶಿಬಿರಾರ್ಥಿಗಳಿಗೆ ವಸತಿ ವ್ಯವಸ್ಥೆ ಇರುವುದಿಲ್ಲ.

ತರಬೇತಿ ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಮಧ್ಯಾಹ್ನದ ಲಘು ಉಪಹಾರವನ್ನು ಒದಗಿಸಲಾಗುವುದು. ಅರ್ಜಿದಾರರು ಇತ್ತೀಚಿನ ಭಾವಚಿತ್ರ, ಆಧಾರ್, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪದವಿ ಅಂಕಪಟ್ಟಿ ಹಾಗೂ ಜನ್ಮ ದಿನಾಂಕದ ದಾಖಲೆಗಳನ್ನು ಲಗತ್ತಿಸಬೇಕು. ಅರ್ಜಿದಾರರು 2023-24ನೇ ಸಾಲಿನ ನಂತರ ಯಾವುದೇ ಪದವಿ ಪೂರ್ಣಗೊಳಿಸಿರಬೇಕು ಅಥವಾ ಅಂತಿಮ ವರ್ಷದ ಯಾವುದೇ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.

ಅರ್ಜಿದಾರರು ಗರಿಷ್ಠ 29 ವರ್ಷ ವಯೋಮಾನದವರಾಗಿರಬೇಕು. ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳು ಶಿಸ್ತು ಹಾಗೂ ಸಂಯಮದಿ0ದ ಇರಬೇಕು. ಅನುಚಿತವಾಗಿ ವರ್ತಿಸಿದಲ್ಲಿ ಇಲಾಖೆಯ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು.

ತರಬೇತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಬಿ.ಕೀರ್ತಿವರ್ಧನ ದ್ವಿ.ದ.ಸ: 7676343554 ಹಾಗೂ ದೂರವಾಣಿ: 08539-230121 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande