
ಬೆಂಗಳೂರು, 25 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಬೆಂಗಳೂರು ನಗರದ ಕೆ.ಆರ್.ಪುರಂನ ತ್ರಿವೇಣಿ ನಗರದಲ್ಲಿ ಬೆಳಗ್ಗೆ ಸಂಭವಿಸಿದ ಭೀಕರ ಸಿಲಿಂಡರ್ ಸ್ಫೋಟದಿಂದ ಬೃಹತ್ ಕಟ್ಟಡವೊಂದು ಸಂಪೂರ್ಣವಾಗಿ ನೆಲಸಮಗೊಂಡಿದೆ. ಈ ದುರ್ಘಟನೆಯಲ್ಲಿ ಓರ್ವ ವೃದ್ದೆ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆ ಬೆಳಗ್ಗೆ ಸುಮಾರು 7 ಗಂಟೆಯ ಸುಮಾರಿಗೆ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಸ್ಫೋಟದ ತೀವ್ರತೆಯಿಂದ ಅಕ್ಕಪಕ್ಕದ ಮನೆಗಳ ಕಿಟಕಿಗಳು ಮತ್ತು ಗೋಡೆಗಳಿಗೂ ಹಾನಿಯಾಗಿದೆ. ಸ್ಥಳಕ್ಕೆ ಕೆ.ಆರ್.ಪುರಂ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಅದೇ ರೀತಿ ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್ ತಂಡಗಳು ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸುತ್ತಿವೆ. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರಾಥಮಿಕವಾಗಿ ಇದು ಸಿಲಿಂಡರ್ ಸ್ಫೋಟವಾಗಿರುವ ಸಾಧ್ಯತೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳದಲ್ಲಿ ರಕ್ಷಣಾ ಸಿಬ್ಬಂದಿಗಳು ಶೋಧ ಮತ್ತು ಅವಶೇಷ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa