ಧರ್ಮಸ್ಥಳ ಪ್ರಕರಣ : ವಿಚಾರಣೆಗೆ ಹಾಜರಾಗಲು ನಾಲ್ವರಿಗೆ ಎಸ್ಐಟಿ ನೋಟಿಸ್
ಮಂಗಳೂರು, 25 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿ ತನಿಖೆ ಮುಂದುವರೆದಿದ್ದು. ಈ ಪ್ರಕರಣದ ಕುರಿತು ವಿಚಾರಣೆಗೆ ಹಾಜರಾಗುವಂತೆ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಿದೆ ಸೋಮವಾರ ಬೆಳಿಗ್ಗೆ 10.30ಕ್ಕೆ ಬೆಳ್ತಂಗ
Notice


ಮಂಗಳೂರು, 25 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿ ತನಿಖೆ ಮುಂದುವರೆದಿದ್ದು. ಈ ಪ್ರಕರಣದ ಕುರಿತು ವಿಚಾರಣೆಗೆ ಹಾಜರಾಗುವಂತೆ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ನಾಲ್ವರಿಗೆ ನೋಟಿಸ್ ನೀಡಿದೆ

ಸೋಮವಾರ ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಹಾಗೂ ವಿಠಲ ಗೌಡರಿಗೆ ನೋಟಿಸ್ ನೀಡಲಾಗಿದೆ. ನೋಟಿಸ್ ನೀಡಿರುವ ಎಸ್ಐಟಿ ತನಿಖಾಧಿಕಾರಿ ಜಿತೇಂದ್ರ ದಯಾಮಾ, ಹಾಜರಾಗದಿದ್ದರೆ ಬಂಧನ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಬಿಎನ್ ಎಸ್ಎಸ್ 35(3) ಅಡಿಯಲ್ಲಿ ನೀಡಲಾದ ನೋಟಿಸ್‌ನಲ್ಲಿ, ಪ್ರಕರಣದ ಸಂದರ್ಭಗಳು ಮತ್ತು ಸಂಬಂಧಿತ ಸಂಗತಿಗಳನ್ನು ಖಚಿತಪಡಿಸಲು ಈ ನಾಲ್ವರ ಹಾಜರಾತಿ ಅಗತ್ಯವಿದ್ದುದಾಗಿ ವಿವರಿಸಲಾಗಿದೆ. ತನಿಖಾಧಿಕಾರಿಯು ನೋಟಿಸ್‌ನಲ್ಲಿ ಪ್ರಕರಣದ ಮಹತ್ವಪೂರ್ಣ ಅಂಶಗಳನ್ನು ಉಲ್ಲೇಖಿಸಿ, ಮಾಹಿತಿಯನ್ನು ದೃಢಪಡಿಸಲು ಅವರ ಸಹಕಾರವನ್ನು ಕೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande