ಧಾರವಾಡ ಜಿಲ್ಲಾ ಪೊಲೀಸರ ಕಾರ್ಯಾಚರಣೆ ; 54 ಇಸ್ಪೀಟ ಜೂಜಾಟ ಪ್ರಕರಣ ದಾಖಲು
ಧಾರವಾಡ, 25 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವ ಕುರಿತು ಸೂಕ್ತ ಮಾಹಿತಿ ಸಂಗ್ರಹಿಸಿ ಅಕ್ಟೋಬರ್ 20, 2025 ರಿಂದ ಅಕ್ಟೋಬರ್ 23, 2025 ರ ವರೆಗೆ ಧಾರವಾಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾ
SP dwd


ಧಾರವಾಡ, 25 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವ ಕುರಿತು ಸೂಕ್ತ ಮಾಹಿತಿ ಸಂಗ್ರಹಿಸಿ ಅಕ್ಟೋಬರ್ 20, 2025 ರಿಂದ ಅಕ್ಟೋಬರ್ 23, 2025 ರ ವರೆಗೆ ಧಾರವಾಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ

ಮೂರು ದಿನದ ಅವಧಿಯಲ್ಲಿ ಒಟ್ಟು 54 ಇಸ್ಪೀಟ ಜೂಜಾಟ ಪ್ರಕರಣಗಳ ಪತ್ತೆ ಮಾಡಲಾಗಿದೆ. ಮತ್ತು 492 ಜನ ಆರೋಪಿತರನ್ನು ವಶಕ್ಕೆ ಪಡೆದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪೊಲೀಸ್ ದಾಳಿ ಸಂದರ್ಭದಲ್ಲಿ ಆರೋಪಿತರಿಂದ

ರೂ‌ 4,41,535 ಗಳ ನಗದು ಜಪ್ತಿ ಮಾಡಿ, ಪೊಲೀಸ ವಶಕ್ಕೆ ಪಡೆಯಲಾಗಿದೆ.

ಧಾರವಾಡ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ 11 ಪ್ರಕರಣಗಳು, ಗರಗ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ 10 ಪ್ರಕರಣಗಳು, ನವಲಗುಂದ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ 8 ಪ್ರಕರಣಗಳು, ಹುಬ್ಬಳ್ಳಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ 6 ಪ್ರಕರಣಗಳು, ಕುಂದಗೋಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ 5 ಪ್ರಕರಣಗಳು, ಅಣ್ಣಿಗೇರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ 5 ಪ್ರಕರಣಗಳು, ಗುಡಗೇರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ 5 ಪ್ರಕರಣಗಳು, ಕಲಘಟಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ 3 ಪ್ರಕರಣಗಳು, ಅಳ್ಳಾವರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ 1 ಪ್ರಕರಣ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ಒಟ್ಟು 54 ಇಸ್ಪೀಟ ಜೂಜಾಟ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಕರಣಗಳಲ್ಲಿ ಭಾಗಿಯಾಗಿದ್ದ

492 ಆರೋಪಿತರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರ ಮಾರ್ಗದರ್ಶನದಲ್ಲಿ. ಪ್ರಭಾರಿ ಹೆಚ್ಚುವರಿ ಪೊಲೀಸ ಅಧೀಕ್ಷಕ ಮತ್ತು ಸಿಇಎನ್ ಪೊಲೀಸ ಠಾಣೆಯ ಪೊಲೀಸ ಉಪಾಧೀಕ್ಷಕ ಶಿವಾನಂದ ಕಟಗಿ ಮತ್ತು ಧಾರವಾಡ ಗ್ರಾಮೀಣ ಉಪ ವಿಭಾಗ ಪೊಲೀಸ ಉಪಾಧೀಕ್ಷಕರಾದ

ವಿನೋದ ಮುತ್ತೇದಾರ ಅವರ ನೇತೃತ್ವದಲ್ಲಿ ಜಿಲ್ಲೆಯ ಠಾಣೆಗಳ ಪೊಲೀಸ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande