
ಮೈಸೂರು, 25 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ನಿವಾಸದಲ್ಲಿ ಗ್ಯಾಸ್ ಗೀಸರ್ ಸೋರಿಕೆಯ ಪರಿಣಾಮವಾಗಿ ಇಬ್ಬರು ಯುವತಿಯರು ಮೃತಪಟ್ಟಿದ್ದಾರೆ. ಮೃತರನ್ನು ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಎಂದು ಗುರುತಿಸಲಾಗಿದೆ.
ಘಟನೆಯ ಸಂದರ್ಭದಲ್ಲಿ ಇಬ್ಬರೂ ಸ್ನಾನ ಮಾಡಲು ಬಾತ್‌ರೂಮ್‌ಗೆ ತೆರಳಿದ್ದರು. ಅನೇಕ ಸಮಯ ಕಳೆದರೂ ಹೊರಬರದುದರಿಂದ ಅವರ ತಂದೆ ಅಲ್ತಾಫ್ ಬಾತ್‌ರೂಮ್ ಬಾಗಿಲನ್ನು ಒಡೆದು ಪರಿಶೀಲಿಸಿದಾಗ, ಇಬ್ಬರೂ ಅರೆ ಪ್ರಜ್ಞಾವಸ್ಥೆಯಲ್ಲಿ ಇರುವುದನ್ನು ಕಂಡಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಮಾರ್ಗದಲ್ಲಿಯೇ ಇಬ್ಬರೂ ಮೃತರಾಗಿದ್ದಾರೆ.
ಸ್ಥಳಕ್ಕೆ ಸ್ಥಳೀಯ ಪೊಲೀಸ್ ಮತ್ತು ರಕ್ಷಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa