ಶಿವಾನಂದ ತಗಡೂರು ಮತ್ತೊಮ್ಮೆ ರಾಜ್ಯಾಧ್ಯಕ್ಷರಾಗಲಿ : ಬ್ರಹ್ಮಾನಂದ್
ಕೊಪ್ಪಳ, 25 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರು ಮತ್ತೊಮ್ಮೆ ರಾಜ್ಯದಲ್ಲಿ ಅವಿರೋಧವಾಗಿ ರಾಜ್ಯಾಧ್ಯಕ್ಷರಾಗಲಿ ಎಂದು ಬ್ರಹ್ಮಾನಂದ್ ಬಡಿಗೇರ್ ಹೇಳಿದರು. ನಗರದ ಪತ್ರಿಕಾ ಭವನದ ಚುನಾವಣಾ ಕಚೇರಿಯಲ್ಲಿ ಪ್ರಸಕ್ತ ಸಾಲಿನ ಜಿಲ್ಲ
ಶಿವಾನಂದ ತಗಡೂರು ರವರು ಮತ್ತೊಮ್ಮೆ ರಾಜ್ಯಾಧ್ಯಕ್ಷರಾಗಲಿ; ಬ್ರಹ್ಮಾನಂದ್


ಶಿವಾನಂದ ತಗಡೂರು ರವರು ಮತ್ತೊಮ್ಮೆ ರಾಜ್ಯಾಧ್ಯಕ್ಷರಾಗಲಿ; ಬ್ರಹ್ಮಾನಂದ್


ಕೊಪ್ಪಳ, 25 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರು ಮತ್ತೊಮ್ಮೆ ರಾಜ್ಯದಲ್ಲಿ ಅವಿರೋಧವಾಗಿ ರಾಜ್ಯಾಧ್ಯಕ್ಷರಾಗಲಿ ಎಂದು ಬ್ರಹ್ಮಾನಂದ್ ಬಡಿಗೇರ್ ಹೇಳಿದರು.

ನಗರದ ಪತ್ರಿಕಾ ಭವನದ ಚುನಾವಣಾ ಕಚೇರಿಯಲ್ಲಿ ಪ್ರಸಕ್ತ ಸಾಲಿನ ಜಿಲ್ಲಾ ಘಟಕದ ಜಿಲ್ಲಾ ಕಾರ್ಯಕಾರಣಿ ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ನಂತರ ಮಾತನಾಡಿ,ಮಹಾಮಾರಿ ಕೊರೋನಾ ಸಂದರ್ಭದಲ್ಲಿ ಪತ್ರಕರ್ತರಿಗೆ ಸಂಕಷ್ಟ ಎದುರಾದಾಗ ಸರ್ಕಾರದಿಂದ ಹಾಗೂ ಸಂಘದಿಂದ ನೆರವಿಗೆ ನಿಂತಿದ್ದಾರೆ. ಶಿವಾನಂದ ತಗಡೂರು ಅವರು ಎರಡು ಬಾರಿ ರಾಜ್ಯಾಧ್ಯಕ್ಷರಾಗಿ ಉತ್ತಮ ಕಾರ್ಯಗಳನ್ನ ಮಾಡಿದ್ದಾರೆ.

ಪ್ರಸಕ್ತ ರಾಜ್ಯ ಘಟಕದ ಚುನಾವಣೆಯಲ್ಲಿ ಪ್ರತಿ ಜಿಲ್ಲೆಯಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರು ಇವರಿಗೆ ಬೆಂಬಲ ನೀಡಬೇಕು ಹಾಗೂ ರಾಜ್ಯ ಘಟಕದ ಹಿರಿಯರು ಪ್ರತಿ ಜಿಲ್ಲೆಯ ಜಿಲ್ಲಾಧ್ಯಕ್ಷರು, ಎಲ್ಲರೂ ಸೇರಿಕೊಂಡು ಅವಿರೋಧವಾಗಿ ಶಿವಾನಂದ ತಗಡೂರ ಅವರನ್ನ ರಾಜ್ಯಾಧ್ಯಕ್ಷರನ್ನಾಗಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಜಿ.ಸಿ ಲೋಕೇಶ್ ಅವರನ್ನ ಆಯ್ಕೆ ಮಾಡಬೇಕಾಗಿದೆ. ಅನೇಕ ಜಿಲ್ಲೆಗಳಿಗೆ ಪತ್ರಿಕಾ ಭವನ ಸೇರಿದಂತೆ ರಾಜ್ಯ ಸರ್ಕಾರದಿಂದ ಅನುದಾನ ಕೊಡಿಸುವಲ್ಲಿ ಪ್ರಮುಖ ರೂವಾರಿಗಳಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಕೊಪ್ಪಳ ಜಿಲ್ಲಾ ಘಟಕದ ಜಿಲ್ಲಾ ಕಾರ್ಯಕಾರಣಿ ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದೇನೆ. ಹೀಗಾಗಿ ರಾಜ್ಯದಲ್ಲಿ ಶಿವಾನಂದ್ ತಗಡೂರ ಅವರು ಮತ್ತೊಮ್ಮೆ ರಾಜ್ಯಾಧ್ಯಕ್ಷರಾಗಲಿ ಎಂದು ಹೇಳಿದರು.

ಚುನಾವಣಾ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದ ಚಂದ್ರಕಾಂತ್ ದೊಡ್ಡಮನಿ, ಸಿದ್ದಲಿಂಗಯ್ಯ ಹಿರೇಮಠ, ವಿನಾಯಕ್ ಗುಡ್ಲಾನೂರ್, ಎಂ. ಎನ್ ಕುಂದಗೋಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande