ನ್ಯಾಯಮಿತ್ರ ಸಹಕಾರಿ ಬ್ಯಾಂಕ್‌ ಎತ್ತರಕ್ಕೆ ಬೆಳೆಯಲಿ : ಡಿ.ಕೆ.ಶಿವಕುಮಾರ್
ಬೆಂಗಳೂರು, 25 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್‌ ನಿಯಮಿತದ ಬೆಳ್ಳಿಮಹೋತ್ಸವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು 25/10/1999ರಲ್ಲಿ ಆಗಿನ ಮುಖ್ಯಮಂತ್ರಿ ಆಗಿದ್ದ ಎಸ್‌.ಎಂ ಕೃಷ್ಣ ಅವರೊಂದಿಗೆ
Dks


ಬೆಂಗಳೂರು, 25 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್‌ ನಿಯಮಿತದ ಬೆಳ್ಳಿಮಹೋತ್ಸವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು 25/10/1999ರಲ್ಲಿ ಆಗಿನ ಮುಖ್ಯಮಂತ್ರಿ ಆಗಿದ್ದ ಎಸ್‌.ಎಂ ಕೃಷ್ಣ ಅವರೊಂದಿಗೆ ಸೇರಿ ಈ ಸಹಕಾರಿ ಬ್ಯಾಂಕ್‌ ಅನ್ನು ಉದ್ಘಾಟನೆ ಮಾಡಿದ್ದೆ. ಇದೀಗ 25 ವರ್ಷಗಳ ಬಳಿಕ ಮತ್ತೆ ಬೆಳ್ಳಿಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಸಂತಸದ ವಿಷಯವಾಗಿದೆ. ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಮೂಲಕ ಜನಪರವಾಗಿ ಕೆಲಸ ಮಾಡುತ್ತಿರುವ ನ್ಯಾಯಮಿತ್ರ ಸಹಕಾರಿ ಬ್ಯಾಂಕ್‌ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande