
ಬೆಂಗಳೂರು, 25 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರದವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳ ಬಹುಭಾಗ, ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅಕ್ಟೋಬರ್ 27ರಂದು ಕೆಲವು ಭಾಗಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa