
ಹಾಸನ, 25 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ ಚೌಧರಿ ಅವರು ನ.03 ರಿಂದ 05 ರವರೆಗೆ ಹಾಸನ ಜಿಲ್ಲೆಯ ಪ್ರವಾಸ ಮಾಡಲಿದ್ದಾರೆ.
ನ.03 ರಂದು ಹಾಸನಕ್ಕೆ ಆಗಮಿಸಲಿದ್ದು ಅಂದು ಮ.12.30 ಗಂಟೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಹಯೋಗದೊಂದಿಗೆ ಹಾಸನಾಂಬ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಪಿಯು ಹಾಗೂ ಪದವಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮ.04 ಗಂಟೆಗೆ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಲಿದ್ದಾರೆ. ಸಂಜೆ.05 ಗಂಟೆಗೆ ಹಾಸನದ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಪೋಸ್ಟ್ ಮೆಟ್ರಿಕ್ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಲಿದ್ದಾರೆ. ನಂತರ ರಾತ್ರಿ ಹಾಸನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ನ.04 ರಂದು ಬೆ.09 ಗಂಟೆಗೆ ಹಾಸನದ ಜಿಲ್ಲಾಸ್ಪತ್ರೆ ಮತ್ತು ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ನಂತರ ಬೆ.11 ಗಂಟೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಹಾಸನಾಂಬ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ POSH ಅಧಿನಿಯಮ 2013ರ ತರಬೇತಿ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮ.12 ಗಂಟೆಗೆ ಹಾಸನದಿಂದ ಹೊರಟು ಮ.01 ಗಂಟೆಗೆ ಮಧ್ಯಾಹ್ನ ಗಂಟೆಗೆ ಅರಕಲಗೂಡು ತಾಲ್ಲೂಕು ಸಾರ್ವಜನಿಕ ಆಸತ್ರೆಗೆ ಭೇಟಿ ನೀಡಲಿದ್ದಾರೆ. ಮ.03 ಗಂಟೆಗೆ ಅರಕಲಗೂಡು ಪೊಲೀಸ್ ರಾಣೆಗೆ ಭೇಟಿ ನೀಡಲಿದ್ದಾರೆ. ಸಂಜೆ 05 ಗಂಟೆಗೆ ಸಮಾಜ ಕಲ್ಯಾಣ ಇಲಾಖೆಯ ಪೋಸ್ಟ್ ಮೆಟ್ರಿಕ್ /ಉದ್ಯೋಗಾಧಾರಿತ ಭೇಟಿ ನೀಡಲಿದ್ದಾರೆ. ನಂತರ ಹಾಸನಕ್ಕೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ.
ನ.05 ರಂದು ಬೆ.11 ಗಂಟೆಗೆ ಮಹಿಳಾ ಸ್ಪಂದನಾ ಕಾರ್ಯಕ್ರಮ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮ.03 ಗಂಟೆಗೆ ಪತ್ರಿಕಾಗೋಷ್ಠಿ ಮಾಡಲಿದ್ದಾರೆ. ಸಂಜೆ 05 ಗಂಟೆಗೆ ಹಾಸನದಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa