ರಾಜ್ಯ ಸರಕಾರದ ವಿರುದ್ದ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು, 25 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರದ ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ಟೀಕೆ ವ್ಯಕ್ತಪಡಿಸಿದ್ದು, ಇದು ಸರ್ಕಾರದ 6ನೇ ಗ್ಯಾರಂಟಿ , ಜನತೆಗೆ ಟೋಪಿ ಹಾಕುವ ಯೋಜನೆ” ಎಂದು ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನ ಜೆಡಿಎಸ್
ರಾಜ್ಯ ಸರಕಾರದ ವಿರುದ್ದ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ


ಬೆಂಗಳೂರು, 25 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರದ ಬಿ ಖಾತಾದಿಂದ ಎ ಖಾತಾ ಮಾಡುವ ಯೋಜನೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ತೀವ್ರ ಟೀಕೆ ವ್ಯಕ್ತಪಡಿಸಿದ್ದು, ಇದು ಸರ್ಕಾರದ 6ನೇ ಗ್ಯಾರಂಟಿ , ಜನತೆಗೆ ಟೋಪಿ ಹಾಕುವ ಯೋಜನೆ” ಎಂದು ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಯಿಂದ ಜನರಿಗೆ ಅನುಕೂಲಕ್ಕಿಂತ ಹೊರೆಯೇ ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.ಕಾಂಗ್ರೆಸ್ ಎ-ಖಾತಾ ಬಿ-ಖಾತಾದಲ್ಲಿ ಜನರನ್ನು ಲೂಟಿ ಮಾಡಲು ಮುಂದಾಗಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

“ಐದು ಗ್ಯಾರಂಟಿಗಳ ಹೆಸರಿನಲ್ಲಿ ಈಗಾಗಲೇ ರಾಜ್ಯ ಖಜಾನೆ ಖಾಲಿ ಮಾಡಿದ್ದಾರೆ. ಈಗ ಎ-ಖಾತಾ ಬಿ-ಖಾತಾದಲ್ಲಿ ಲೂಟಿ ಮಾಡಲು ಮುಂದಾಗಿದ್ದಾರೆ. ಬೆಸ್ಕಾಂನಲ್ಲಿ 3–4 ಲಕ್ಷ ಅರ್ಜಿಗಳು ಬಂದಿವೆ ಎಂದು ಹೇಳುತ್ತಾರೆ. ಆದರೆ ಇದರಿಂದ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಸರ್ಕಾರ 5% ಹೆಚ್ಚುವರಿ ಶುಲ್ಕ ಹೇರುತ್ತಿದೆ. ಇದು ಜನರಿಗೆ ಹೊರೆಯಾಗಲಿದೆ” ಎಂದು ಆರೋಪಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande