ರಮೇಶ ಕತ್ತಿ ವಿರುದ್ಧ ಕಾನೂನು ಕ್ರಮಕ್ಕೆ ಬಟಗಿ ಒತ್ತಾಯ
ವಿಜಯಪುರ, 26 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಚಿಕ್ಕೋಡಿ ಕ್ಷೇತ್ರದ ಮಾಜಿ ಸಂಸದ ರಮೇಶ ಕತ್ತಿ ಅವರು ಸಾರ್ವಜನಿಕವಾಗಿ ಬೇಡ ಸಮಾಜದ ಜಾತಿ ನಿಂದನೆ ಮಾಡಿರುವುದು, ಬೇಡ (ವಾಲ್ಮೀಕಿ) ಸಮಾಜದ ಸ್ವಾಭಿಮಾನಕ್ಕೆ ಧಕ್ಕೆಯುಂಟಾಗಿದೆ. ಕೂಡಲೇ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತೀಯ ವಾಲ್
ಕತ್ತಿ


ವಿಜಯಪುರ, 26 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಚಿಕ್ಕೋಡಿ ಕ್ಷೇತ್ರದ ಮಾಜಿ ಸಂಸದ ರಮೇಶ ಕತ್ತಿ ಅವರು ಸಾರ್ವಜನಿಕವಾಗಿ ಬೇಡ ಸಮಾಜದ ಜಾತಿ ನಿಂದನೆ ಮಾಡಿರುವುದು, ಬೇಡ (ವಾಲ್ಮೀಕಿ) ಸಮಾಜದ ಸ್ವಾಭಿಮಾನಕ್ಕೆ ಧಕ್ಕೆಯುಂಟಾಗಿದೆ. ಕೂಡಲೇ ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿದ ಅವರು, ರಮೇಶ ಕತ್ತಿ ಅವರಿಗೆ ಓರ್ವ ಮಾಜಿ ಜನಪ್ರತಿನಿಧಿಯಾಗಿ, ಸಾರ್ವಜನಿಕವಾಗಿ ಹೇಗೆ ಮಾತನಾಡಬೇಕು ಎಂಬ ಕನಿಷ್ಠ ಪ್ರಜ್ಞೆ ಇಲ್ಲದೆ ವರ್ತಿಸುತ್ತಿರುವುದು ಎಷ್ಟು ಸರಿ ?, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಪರಿಶಿಷ್ಟ ಪಂಗಡದ ಜನಾಂಗದ ಬಗ್ಗೆ ಅವಹೇಳನ ಮಾಡಿರುವ ಕತ್ತಿಯವರನ್ನು ಬಂಧಿಸಿ ಅವರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು, ಬೇಡ ಸಮಾಜಕ್ಕೆ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಅವರ ವಿರುದ್ಧ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande