ರಾಜ್ಯ ಸರಕಾರದಿಂದ ಹಗಲು ದರೋಡೆ : ನಿಖಿಲ್ ಕುಮಾರಸ್ವಾಮಿ
ರಾಮನಗರ, 26 ಅಕ್ಟೋಬರ್ (ಹಿ.ಸ.) : ಆ್ಯಂಕರ್ : ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರನ್ನು ಸುಲಿಗೆ ಮಾಡಲು ಮುಂದಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹ
ರಾಜ್ಯ ಸರಕಾರದಿಂದ ಹಗಲು ದರೋಡೆ : ನಿಖಿಲ್ ಕುಮಾರಸ್ವಾಮಿ


ರಾಮನಗರ, 26 ಅಕ್ಟೋಬರ್ (ಹಿ.ಸ.) :

ಆ್ಯಂಕರ್ : ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರನ್ನು ಸುಲಿಗೆ ಮಾಡಲು ಮುಂದಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸರ್ಕಾರ ಖಾತಾ ಪರಿವರ್ತನೆ ಹೆಸರಿನಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ಆದಾಯ ತರಲು ಹೊರಟಿದೆ. ಬಡವರ ಹೊಟ್ಟೆ ಮೇಲೆ ಹೊಡೆದು ಆದಾಯ ತರಲು ಹೊರಟಿದ್ದಾರೆ. ಜನರಿಗೆ ಒಳ್ಳೆಯದು ಮಾಡಬೇಕೆಂದರೆ ಹಿಂದಿನ ಎಸ್​ಆರ್ ವ್ಯಾಲ್ಯೂ ಮೇಲೆ ದರ ನಿಗದಿ ಮಾಡಿ ಎಂದು ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande