
ಬೆಳಗಾವಿ, 26 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಸಂಪುಟ ಪುನರ್ ರಚನೆ ಬಗ್ಗೆ ವರಿಷ್ಠರ ಮಟ್ಟದಲ್ಲಿ ಚರ್ಚೆ ಆಗಬೇಕು. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ನಿರ್ಧಾರ ಕೈಗೊಳ್ಳುತ್ತಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಂಪುಟ ಬದಲಾದರೆ ಹಳಬರು ಹೋಗಿ, ಹೊಸ ಸಚಿವರು ಬಂದೇ ಬರುತ್ತಾರೆ. ಈ ಮುಂಚೆಯೇ 30 ತಿಂಗಳ ಬಳಿಕ ಮಾಡಬೇಕು ಎಂದು ಚರ್ಚೆ ನಡೆಯುತ್ತಿತ್ತು. ಈಗ ಅದು ಬಹುಶಃ ಅಂತಿಮ ಹಂತಕ್ಕೆ ಬಂದಿರಬಹುದು. ಬೆಳಗಾವಿಯಿಂದ ಯಾರಿಗೆ ಸಚಿವ ಸ್ಥಾನ ಕೊಡುತ್ತಾರೆ. ಸಂಪುಟದಿಂದ ಯಾರನ್ನು ಕೈ ಬಿಡುತ್ತಾರೆ ಎಂಬುದು ಪಕ್ಷಕ್ಕೆ ಬಿಟ್ಟಿದ್ದು. ಹಿರಿಯ ಸಚಿವರು ತಮ್ಮ ಸ್ಥಾನ ಬಿಟ್ಟು ಕೊಡುವ ಬಗ್ಗೆ ದೆಹಲಿಯಲ್ಲಿ ಹೈಕಮಾಂಡ್ ಹಂತದಲ್ಲಿ ಚರ್ಚೆ ಆಗಿರಬಹುದು. ಆದರೆ, ನಮ್ಮ ಹಂತದಲ್ಲಿ ಯಾವುದೇ ಮಾತುಕತೆ ಆಗಿಲ್ಲ. ಹಾಗಾಗಿ, ಅದರ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa